ಬೆಂಗಳೂರು: ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರಾಗೃಹ ಇಲಾಖೆ ಡಿಜಿಪಿ ಮಾಲಿನಿ ಕೃಷ್ಣಮೂರ್ತಿ ಅವರಿಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ನೋಟಿಸ್ ಜಾರಿ ಮಾಡಿದ್ದಾರೆ.
ಪ್ರಕರಣದ ಕುರಿತು ವಿವರಣೆ ನೀಡುವಂತೆ ನೋಟಿಸ್ ನೀಡಲಾಗಿದೆ. ಪರಪ್ಪನ ಅಗ್ರಹಾರ ಜೈಲಿನ ಅಕ್ರಮ ಸಂಬಂಧ ನೀಡಲಾಗಿದ್ದು, ಮಾಲಿನಿ ಕೃಷ್ಣಮೂರ್ತಿ ವಿರುದ್ಧ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ. ಜೈಲಿನ ಅಕ್ರಮ ತಡೆಗಟ್ಟುವ ಸಂಬಂಧ ನೀವು ಕೈಗೊಂಡ ಕ್ರಮಗಳೇನು? ಜೈಲಿನಲ್ಲಿ ನಡೆಯುತ್ತಿದ್ದ ಅಕ್ರಮಗಳು ನಿಮ್ಮ ಗಮನಕ್ಕೆ ಬಂದಿರಲಿಲ್ಲವೇ? ನೀವು ಕೂಡ ಅಕ್ರಮದಲ್ಲಿ ಭಾಗಿಯಾಗಿದ್ದೀರಿ ಎಂದು ಏಕೆ ಭಾವಿಸಬಾರದು? ವಿವರವಾದ ಉತ್ತರ ನೀಡುವಂತೆ ಮಾಲಿನಿ ಕೃಷ್ಣಮೂರ್ತಿಗೆ ತಾಕೀತು ಮಾಡಲಾಗಿದೆ ಎನ್ನಲಾಗಿದೆ.