ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ನಟ ದರ್ಶನ್ ಹಾಗೂ ಸಹಚರರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
24ನೇ ಎಸಿಎಎಂ ಕೋರ್ಟ್ ಆದೇಶದ ನಂತರ ಪರಪ್ಪನ ಅಗ್ರಹಾರ ಜೈಲು ಸೇರಿದ ದರ್ಶನ್ ಮತ್ತು ಸಹಚರರಿಗೆ ವಿಚಾರಣಾಧೀನ ಕೈದಿ ಸಂಖ್ಯೆ ನೀಡಲಾಗಿದೆ. ದರ್ಶನ್ 6106, ಧನರಾಜ್ 6107, ವಿನಯ್ 6108, ಪ್ರದೋಶ್ 6109 ಸಂಖ್ಯೆಯನ್ನು ನೀಡಲಾಗಿದೆ.
ಭದ್ರತಾ ದೃಷ್ಟಿಯಿಂದ ದರ್ಶನ್ ಅವರನ್ನು ವಿಶೇಷ ಬ್ಯಾರಕ್ ನಲ್ಲಿ ಇರಿಸಲಾಗಿದೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಭದ್ರತಾ ವಿಭಾಗದ ಬ್ಯಾರಕ್ ನಲ್ಲಿ ದರ್ಶನ್ ಸೇರಿದಂತೆ ನಾಲ್ವರನ್ನು ಇರಿಸಲಾಗಿದೆ.