ಎರಡು ವಾರಗಳಿಂದ ಟರ್ಕಿ ಹಾಗೂ ಸಿರಿಯಾದಲ್ಲಿ ಸಂಭವಿಸಿದ 7.8 ತೀವ್ರತೆಯ ಭೀಕರ ಭೂಕಂಪದಲ್ಲಿ 50,000ಕ್ಕೂ ಅಧಿಕ ಮಂದಿ ಮೃತಪಟ್ಟಿದ್ದಾರೆ. ಪರಿಹಾರ ಕಾರ್ಯಾಚರಣೆ ಇನ್ನೂ ಸಹ ಮುಂದುವರೆದಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಭೀತಿ ವ್ಯಕ್ತವಾಗಿದೆ.
ಇದರ ಮಧ್ಯೆ ಸೋಮವಾರದಂದು 6.4 ತೀವ್ರತೆಯ ಮತ್ತೊಂದು ಭೂಕಂಪನ ಸಂಭವಿಸಿದ್ದು, ಜನತೆಯ ಆತಂಕ ಮತ್ತಷ್ಟು ಹೆಚ್ಚಾಗಿದೆ. ಈ ಭೂಕಂಪನದಲ್ಲಿ ಮೂರು ಮಂದಿ ಸಾವನ್ನಪ್ಪಿ 200ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸೋಮವಾರ ಭೂಮಿಯ 10 ಕಿಲೋಮೀಟರ್ ಆಳದಲ್ಲಿ ಭೂಕಂಪನ ಸಂಭವಿಸಿದ್ದು, ಇದರ ದೃಶ್ಯ ಪಾರ್ಕಿಂಗ್ ನಲ್ಲಿ ನಿಲ್ಲಿಸಿದ್ದ ಕಾರೊಂದರ ಡ್ಯಾಶ್ ಕ್ಯಾಮ್ ನಲ್ಲಿ ಸೆರೆಯಾಗಿದೆ. ನಿರ್ಜನ ಬೀದಿಯಲ್ಲಿ ನಿಲ್ಲಿಸಿದ್ದ ಕಾರುಗಳು ಇದ್ದಕ್ಕಿದ್ದಂತೆ ಅಲುಗಾಡಲು ಆರಂಭಿಸಿದ್ದು ಭೂಕಂಪದ ತೀವ್ರತೆಯನ್ನು ಬಿಂಬಿಸುತ್ತಿದೆ.