
ಏಕದಿನ ವಿಶ್ವಕಪ್ ಪಂದ್ಯಾವಳಿಗೆ ಈಗಾಗಲೇ ವೇಳಾಪಟ್ಟಿ ಪ್ರಕಟಿಸಲಾಗಿದ್ದು, ಬುಧವಾರದಂದು 9 ಪಂದ್ಯಗಳ ಪರಿಷ್ಕೃತ ವೇಳಾಪಟ್ಟಿ ಪ್ರಕಟವಾಗಿದೆ.
ಪರಿಷ್ಕೃತ ವೇಳಾಪಟ್ಟಿಯಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವಿನ ಹೈ ವೋಲ್ಟೇಜ್ ಪಂದ್ಯವೂ ಸೇರಿದ್ದು, ಈ ಪಂದ್ಯ ಅಕ್ಟೋಬರ್ 15 ರ ಬದಲಾಗಿ ಅಕ್ಟೋಬರ್ 14ರಂದು ಅಹಮದಾಬಾದ್ ನಲ್ಲಿ ನಡೆಯಲಿದೆ ಎಂದು ಮೂಲಗಳು ಹೇಳಿವೆ.
ಏಕದಿನ ವಿಶ್ವಕಪ್ ಪಂದ್ಯಾವಳಿಗಳ ಟಿಕೆಟ್ ಮಾರಾಟ ಆಗಸ್ಟ್ 25 ರಿಂದ ಪ್ರಾರಂಭವಾಗಲಿದ್ದು, ಆಗಸ್ಟ್ 30 ರಿಂದ ಸೆಪ್ಟೆಂಬರ್ 3 ರ ವರೆಗೆ ಭಾರತದ ಪಂದ್ಯಗಳ ಟಿಕೆಟ್ ಲಭ್ಯವಾಗಲಿದೆ.
