ನವದೆಹಲಿ: ಪ್ರಜಾಪ್ರಭುತ್ವದ ಹಬ್ಬ ಎಂದೇ ಹೇಳಲಾಗುವ ಸಾರ್ವತ್ರಿಕ ಲೋಕಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ಪ್ರಕಟಿಸಲಾಗುವುದು.
ಕೇಂದ್ರ ಚುನಾವಣಾ ಆಯೋಗ ಇಂದು ಮಧ್ಯಾಹ್ನ 3 ಗಂಟೆಗೆ ಪತ್ರಿಕಾಗೋಷ್ಠಿ ಕರೆದಿದೆ. ಲೋಕಸಭೆ ಚುನಾವಣೆಯ ಜೊತೆಗೆ ನಾಲ್ಕು ರಾಜ್ಯಗಳ ವಿಧಾನಸಭೆ ಚುನಾವಣೆ ಘೋಷಣೆ ಆಗಲಿದೆ. ಮಧ್ಯಾಹ್ನ 3 ಗಂಟೆಗೆ ಮುಖ್ಯ ಚುನಾವಣಾ ಆಯುಕ್ತರು ಹಾಗೂ ಮತ್ತಿಬ್ಬರು ನೂತನ ಚುನಾವಣಾ ಆಯುಕ್ತರು ಪತ್ರಿಕಾಗೋಷ್ಠಿ ನಡೆಸಿ ಚುನಾವಣೆ ದಿನಾಂಕ ಪ್ರಕಟಿಸಲಿದ್ದಾರೆ.
ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದ್ದು, ಸರ್ಕಾರ ಅಥವಾ ಸಚಿವರು ಅನುದಾನ ಅಥವಾ ಭರವಸೆಗಳನ್ನು ನೀಡುವಂತಿಲ್ಲ. ಶಂಕುಸ್ಥಾಪನೆ, ಉದ್ಘಾಟನೆ, ಚಾಲನೆ ಕಾರ್ಯಕ್ರಮಗಳನ್ನು ನೆರವೇರಿಸುವಂತಿಲ್ಲ. ಮತದಾರರ ಮೇಲೆ ಪ್ರಭಾವ ಬೀರುವಂತಹ ನೇಮಕಾತಿ, ಪ್ರಕಟಣೆ ಹೊರಡಿಸುವಂತಿಲ್ಲ.