ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿ ದತ್ತಪೀಠದಲ್ಲಿ ದತ್ತ ಜಯಂತಿ ಹಿನ್ನೆಲೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಹೈ ಅಲರ್ಟ್ ಘೋಷಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಂ ಆಮ್ಟೆ ತಿಳಿಸಿದ್ದಾರೆ.
ಚಿಕ್ಕಮಗಳೂರಿನಲ್ಲಿ ಮಾತನಾಡಿದ ಅವರು, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಾದ್ಯಂತ 4000 ಪೊಲೀಸರನ್ನು ನಿಯೋಜಿಸಲಾಗಿದೆ. ಜಿಲ್ಲೆಯಲ್ಲಿ 28 ಚೆಕ್ ಪೋಸ್ಟ್, ಸಿಸಿಟಿವಿ ಅಳವಡಿಕೆ ಮಾಡಲಾಗಿದೆ. ಪ್ರತಿಯೊಂದು ಚೆಕ್ ಪೋಸ್ಟ್ ಗೂ ವಿಶೇಷ ದಂಡಾಧಿಕಾರಿ ನೇಮಕ ಮಾಡಲಾಗಿದೆ. 300ಕ್ಕೂ ಹೆಚ್ಚು ಸಿಸಿ ಕ್ಯಾಮರಾ, 50ಕ್ಕೂ ಹೆಚ್ಚು ಬಾಡಿ ಕ್ಯಾಮರಾ ಅಳವಡಿಸಲಾಗಿದೆ ಎಂದು ತಿಳಿಸಿದರು.
7 ಎಎಸ್ ಪಿ, 30 ಡಿವೈಎಸ್ ಪಿ, 30 ಇನ್ಸ್ ಪೆಕ್ಟರ್ ಗಳನ್ನು ನಿಯೋಜಿಸಲಾಗಿದೆ. ಮುಂಜಾಗೃತಾ ಕ್ರಮವಾಗಿ ಚಿಕ್ಕಮಗಳೂರಿನಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ ಎಂದು ಹೇಳಿದರು.