ಚಿಕ್ಕಮಗಳೂರು : ಇಂದಿನಿಂದ 7 ದಿನಗಳ ಕಾಲ ದತ್ತಮಾಲಾ ಅಭಿಯಾನ ನಡೆಯಲಿದ್ದು, 3 ದಿನ ಮುಳ್ಳಯ್ಯನಗಿರಿ, ದತ್ತಪೀಠಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ ವಿಧಿಸಲಾಗಿದೆ.
ಚಿಕ್ಕಮಗಳೂರಿನ ಶಂಕರಮಠದಲ್ಲಿ ದತ್ತಮಾಲಾ ಅಭಿಯಾನಕ್ಕೆ ಚಾಲನೆ ನೀಡಿದ್ದು, ಶ್ರೀರಾಮಸೇನೆಯ 100ಕ್ಕೂ ಹೆಚ್ಚು ಕಾರ್ಯಕರ್ತರಿಂದ ಮಾಲಾಧಾರಣೆ ಮಾಡಲಾಗಿದೆ.
ಈ ಹಿನ್ನೆಲೆ ಚಿಕ್ಕಮಗಳೂರಿನಲ್ಲಿರುವ ಪ್ರವಾಸಿಗರ ನೆಚ್ಚಿನ ತಾಣ ಮುಳ್ಳಯ್ಯನಗಿರಿ, ದತ್ತ ಬೆಟ್ಟಕ್ಕೆ ನವೆಂಬರ್ 4 ರಿಂದ 3 ದಿನ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
ದತ್ತಮಾಲಾ ಅಭಿಯಾನ ಹಿನ್ನೆಲೆ ನವೆಂಬರ್ 4 ರಿಂದ 6 ವರೆಗೆಗೆ ದತ್ತಪೀಠ, ಮಾಣಿಕ್ಯಧಾರ, ಸೀತಾಳಯ್ಯನಗಿರಿ, ಮಾಣಿಕ್ಯಧಾರ, ಗಾಳಿಕೆರೆಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಅ.30 ರಿಂದ ನ.5 ರವರೆಗೆ ದತ್ತಮಾಲಾ ಅಭಿಯಾನ ನಡೆಯಲಿದ್ದು, ಸಾವಿರಾರು ಮಾಲಾಧಾರಿಗಳು ದತ್ತಪೀಠಕ್ಕೆ ತೆರಳಲಿದ್ದಾರೆ. ಈ ಹಿನ್ನೆಲೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.ಮುಳ್ಳಯ್ಯನಗಿರಿ ಭಾರತದ ಕರ್ನಾಟಕ ರಾಜ್ಯದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಶ್ಚಿಮ ಘಟ್ಟಗಳ ಬಾಬಾ ಬುಡನ್ಗಿರಿ ಬೆಟ್ಟಸಾಲಿನಲ್ಲಿರುವ ಒಂದು ಶಿಖರ. 1923 ಮೀಟರ್ (೬೩೧೭ ಅಡಿ) ಎತ್ತರದಲ್ಲಿರುವ ಮುಳ್ಳಯ್ಯನ ಗಿರಿ ಕರ್ನಾಟಕದ ಅತ್ಯುನ್ನತ ಪರ್ವತಶಿಖರವಾಗಿದೆ.