ಚಿಕ್ಕಮಗಳೂರು : ಇಂದು ಬಾಬಾ ಬುಡನ್ ಸ್ವಾಮಿ ದರ್ಗಾದಲ್ಲಿ ದತ್ತಮಾಲಾ ಅಭಿಯಾನ ನಡೆಯಲಿದ್ದು, ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.
ಬಾಬಾ ಬುಡನ್ ಸ್ವಾಮಿ ದರ್ಗಾ ಸೇರಿ ಚಿಕ್ಕಮಗಳೂರು ಜಿಲ್ಲೆಯಾದ್ಯಂತ 200ಕ್ಕೂ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದ್ದು, ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಜಿಲ್ಲೆಯ ಹಲವು ಕಡೆ 26 ಚೆಕ್ಪೋಸ್ಟ್, 49 ಸೆಕ್ಟರ್ ಆಫೀಸರ್ ನೇಮಿಸಲಾಗಿದೆ. ಸೂಕ್ಷ್ಮ, ಅತಿ ಸೂಕ್ಷ್ಮ ಪ್ರದೇಶಗಳಲ್ಲಿ ಸಿಸಿ ಕ್ಯಾಮರಾ, ಡ್ರೋನ್ ಕಣ್ಗಾವಲು ಅಳವಡಿಸಲಾಗಿದೆ.
ಪ್ರವಾಸಿಗರಿಗೆ ನೋ ಎಂಟ್ರಿ
ದತ್ತಮಾಲಾ ಅಭಿಯಾನ ಹಿನ್ನೆಲೆ ನವೆಂಬರ್ 4 ರಿಂದ 6 ವರೆಗೆಗೆ ದತ್ತಪೀಠ, ಮಾಣಿಕ್ಯಧಾರ, ಸೀತಾಳಯ್ಯನಗಿರಿ, ಮಾಣಿಕ್ಯಧಾರ, ಗಾಳಿಕೆರೆಗೆ ಪ್ರವೇಶ ನಿರ್ಬಂಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಈ ಹಿನ್ನೆಲೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.ಮುಳ್ಳಯ್ಯನಗಿರಿ ಭಾರತದ ಕರ್ನಾಟಕ ರಾಜ್ಯದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಶ್ಚಿಮ ಘಟ್ಟಗಳ ಬಾಬಾ ಬುಡನ್ಗಿರಿ ಬೆಟ್ಟಸಾಲಿನಲ್ಲಿರುವ ಒಂದು ಶಿಖರ. 1923 ಮೀಟರ್ (೬೩೧೭ ಅಡಿ) ಎತ್ತರದಲ್ಲಿರುವ ಮುಳ್ಳಯ್ಯನ ಗಿರಿ ಕರ್ನಾಟಕದ ಅತ್ಯುನ್ನತ ಪರ್ವತಶಿಖರವಾಗಿದೆ.