alex Certify ಅನೈತಿಕ ಸಂಬಂಧ ಪ್ರಶ್ನಿಸಿದ ಅತ್ತೆ – ಮಾವನನ್ನೇ ಕೊಂದ ಸೊಸೆ….! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅನೈತಿಕ ಸಂಬಂಧ ಪ್ರಶ್ನಿಸಿದ ಅತ್ತೆ – ಮಾವನನ್ನೇ ಕೊಂದ ಸೊಸೆ….!

ಪಂಜಾಬ್‌ನ ಹೋಶಿಯಾರ್‌ಪುರ ಜಿಲ್ಲೆಯಲ್ಲಿ ವೃದ್ಧ ದಂಪತಿಯನ್ನು ಹತ್ಯೆಗೈದ ಆರೋಪದ ಮೇಲೆ ಇಬ್ಬರನ್ನು ಬಂಧಿಸಲಾಗಿದೆ. ಜ.1ರಂದು ಸುಟ್ಟು ಕರಕಲಾದ ಸ್ಥಿತಿಯಲ್ಲಿ ವೃದ್ಧ ದಂಪತಿ ಶವ ಪತ್ತೆಯಾಗಿತ್ತು. ಮೃತರನ್ನು ಮಂಜಿತ್ ಸಿಂಗ್ ಮತ್ತು ಅವರ ಪತ್ನಿ ಗುರ್ಮೀತ್ ಕೌರ್ ಎಂದು ಗುರುತಿಸಲಾಗಿದೆ.

ಇಂಡಿಯನ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಕಟವಾದ ವರದಿಯ ಪ್ರಕಾರ, ವೃದ್ಧ ದಂಪತಿಗಳಿಗೆ ಅವರ ಸೊಸೆಯ ವಿವಾಹೇತರ ಸಂಬಂಧದ ಬಗ್ಗೆ ತಿಳಿದಿತ್ತು. ಇದರಿಂದ ಮೃತರ ಸೊಸೆ ಹಾಗೂ ಆಕೆಯ ಪ್ರಿಯಕರ ಸೇರಿ ಅವರನ್ನ ಮನೆಯಲ್ಲೆ ಚೇರುಗಳಿಗೆ ಕಟ್ಟಿ, ಹಿಂಸಿಸಿ ಕೊನೆಗೆ ಬೆಂಕಿ ಹಚ್ಚಿ ಕೊಲೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡು ಕೊಲೆಗಾರರ ಬೆನ್ನಟ್ಟಿದ ಪಂಜಾಬ್ ಪೊಲೀಸರು ಮೃತರ ಸೊಸೆ ಹಾಗೂ ಆಕೆಯ ಸಂಗಾತಿಯನ್ನ, ಕೊಲೆ ಹಾಗೂ ಕ್ರಿಮಿನಲ್ ಪಿತೂರಿ ಆರೋಪದಡಿಯಲ್ಲಿ ಬಂಧಿಸಿದ್ದಾರೆ. ಮೃತರ ಪುತ್ರ ರವೀಂದರ್ ಸಿಂಗ್ ಜನವರಿ 1ರ ರಾತ್ರಿ ಮನೆಗೆ ಮರಳಿದಾಗ ಗೇಟ್ ಒಳಗಿನಿಂದ ಲಾಕ್ ಆಗಿತ್ತು. ಅದೇ ಅನುಮಾನದಲ್ಲಿ ಮನೆಗೆ ಪ್ರವೇಶಿಸಿದಾಗ, ಅವರು ತನ್ನ ಹೆತ್ತವರ ಶವಗಳನ್ನು ಕುರ್ಚಿಗೆ ಕಟ್ಟಿದ್ದನ್ನು ಕಂಡು ಪೊಲೀಸರಿಗೆ ತಿಳಿಸಿದ್ದಾರೆ‌. ಕದ್ದ ನಗದು ಮತ್ತು ಚಿನ್ನಾಭರಣಗಳೊಂದಿಗೆ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ‌.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...