ಗದಗ: ಪುತ್ರಿ ಪ್ರೀತಿಸಿ ಮದುವೆಯಾಗಿದ್ದರಿಂದ ಅಂಗನವಾಡಿ ಶಿಕ್ಷಕಿ ಮರ್ಯಾದೆಗೆ ಅಂಜಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗದಗ ಜಿಲ್ಲೆ ನರಗುಂದ ತಾಲೂಕಿನ ಶಿರೋಳ ಗ್ರಾಮದ ಸಮೀಪ ನಿವಾಸಿಯಾಗಿರುವ ಅಂಗನವಾಡಿ ಶಿಕ್ಷಕಿ ಸುನಿತಾ(48) ಆತ್ಮಹತ್ಯೆ ಮಾಡಿಕೊಂಡವರು. ಅಂಗನವಾಡಿ ಕಾರ್ಯಕರ್ತೆಯಾಗಿದ್ದ ಸುನಿತಾ ಅವರು ಪ್ರೀತಿಯಿಂದ ಸಾಕಿ ಬೆಳೆಸಿದ ಪುತ್ರಿ ಅದೇ ಗ್ರಾಮದ ಯುವಕನನ್ನು ಪ್ರೀತಿಸಿ ಮದುವೆಯಾಗಿ ಊರು ಬಿಟ್ಟು ಹೋಗಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮಗಳು ಪ್ರೀತಿಸಿ ಮದುವೆಯಾಗಿ ಬೆಂಗಳೂರಿನಲ್ಲಿ ವಾಸವಾಗಿದ್ದು, ಮಗಳು ದೂರವಾಗಿದ್ದನ್ನು ಮನಸ್ಸಿಗೆ ಹಚ್ಚಿಕೊಂಡ ಸುನೀತಾ ತನ್ನ ಸಹೋದರಿ ಮನೆ ಮುಂದಿನ ಮೆಟ್ಟಿಲುಗಳ ಪೈಪ್ ಗೆ ಸೀರೆ ಕಟ್ಟಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನರಗುಂದ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.