ದಾವಣಗೆರೆ: ಹೊಸ ವರ್ಷದ ಸಂಭ್ರಮದಲ್ಲಿ ಯುವಕನಬ್ಬ ಸಾವನ್ನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ.
ದಾವಣಗೆರೆಯ ನೂತನ್ ಕಾಲೇಜು ಮುಂಭಾಗ ಘಟನೆ ನಡೆದಿದೆ. ಹೊಸ ಬಡಾವಣೆಯ ನಿವಾಸಿ ಕಾರ್ತಿಕ್ ಮೃತಪಟ್ಟ ಯುವಕ. ಮಧ್ಯರಾತ್ರಿ ಒಂದು ಗಂಟೆ ಸುಮಾರಿಗೆ ಬೈಕ್ ಅಪಘಾತ ಸಂಭವಿಸಿದೆ. ಸ್ನೇಹಿತರೊಂದಿಗೆ ಸಂಭ್ರಮಾಚರಣೆಗೆ ಬಂದಿದ್ದು, ಅತಿ ವೇಗವಾಗಿ ಬೈಕ್ ಚಾಲನೆ ಮಾಡುವಾಗ ನಿಯಂತ್ರಣ ತಪ್ಪಿ ರಸ್ತೆಗೆ ಅಪ್ಪಳಿಸಿದೆ. ಸ್ಥಳದಲ್ಲೇ ಕಾರ್ತಿಕ್ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.