alex Certify ಬಸ್ ಡಿಕ್ಕಿ: ಅಪಘಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಸ್ ಡಿಕ್ಕಿ: ಅಪಘಾತದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರ ಸಾವು

ದಾವಣಗೆರೆ: ಖಾಸಗಿ ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸಾವನ್ನಪ್ಪಿದ ಘಟನೆ ದಾವಣಗೆರೆ ತಾಲೂಕಿನ ಮಾದಾಪುರ ಕ್ರಾಸ್ ನಲ್ಲಿ ನಡೆದಿದೆ.

ಮೋಹನ್ ನಾಯ್ಕ್(30), ಪೂರ್ಯಾನಾಯ್ಕ್(35) ಮೃತಪಟ್ಟವರು ಎಂದು ಹೇಳಲಾಗಿದೆ. ಮೃತ ಸವಾರರು ಶಿವಮೊಗ್ಗದ ವಿನೋಬನಗರ ನಿವಾಸಿಗಳಾಗಿದ್ದಾರೆ. ಚಲಿಸುತ್ತಿದ್ದ ಬೈಕ್ ಗೆ ಹಿಂದಿನಿಂದ ಬಸ್ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಬಸ್ ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣವಾಗಿದ್ದು, ಅಪಘಾತದ ನಂತರ ಸ್ಥಳದಲ್ಲೇ ಬಸ್ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಹದಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...