ದಾವಣಗೆರೆ: ಸಂಸದ ಜಿ.ಎಂ. ಸಿದ್ದೇಶ್ವರ ಪತ್ನಿ ಗಾಯತ್ರಿ ಸಿದ್ದೇಶ್ವರ್ ಗೆ ನೀಡಿದ ಟಿಕೆಟ್ ಬದಲಾವಣೆಗೆ ಪಟ್ಟು ಹಿಡಿಯಲಾಗಿದೆ. ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ನಿನ್ನೆ ಗೈರು ಹಾಜರಾಗುವ ಮೂಲಕ ಗಟ್ಟಿ ನಿಲುವು ತೋರಲಾಗಿದೆ.
ಮಾಜಿ ಸಚಿವರರಾದ ಎಂ.ಪಿ. ರೇಣುಕಾಚಾರ್ಯ, ಎಸ್.ಎ. ರವೀಂದ್ರನಾಥ, ಕರುಣಾಕರ ರೆಡ್ಡಿ, ಮಾಜಿ ಶಾಸಕರಾದ ಬಸವರಾಜ್ ನಾಯ್ಕ್, ಮಾಡಾಳ್ ವಿರೂಪಾಕ್ಷಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ಶಿವಯೋಗಿಸ್ವಾಮಿ, ಮಾಡಾಳ್ ಮಲ್ಲಿಕಾರ್ಜುನ, ಅಜಯಕುಮಾರ್, ಲೋಕಿಕೆರೆ ನಾಗರಾಜ್, ರವಿಕುಮಾರ್ ಮೊದಲಾದವರು ಅಭ್ಯರ್ಥಿ ಬದಲಿಸುವಂತೆ ಪಟ್ಟು ಹಿಡಿದಿದ್ದಾರೆ.
ಲೋಕಸಭೆ ಚುನಾವಣೆ ಟಿಕೆಟ್ ಆಕಾಂಕ್ಷಿಗಳು ಹಾಗೂ ಮುಖಂಡರು ಸಿಂಡಿಕೇಟ್ ಮಾಡಿಕೊಂಡು ಸಂಸದ ಜಿ.ಎಂ. ಸಿದ್ದೇಶ್ವರ ಪತ್ನಿ ಅವರಿಗೆ ಟಿಕೆಟ್ ನೀಡಿರುವುದನ್ನು ವಿರೋಧಿಸಿದ್ದಾರೆ. ಮಾಜಿ ಸಚಿವ ಮುರುಗೇಶ್ ನಿರಾಣಿ, ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್, ಬಿಜೆಪಿ ಜಿಲ್ಲಾಧ್ಯಕ್ಷ ರಾಜಶೇಖರ್ ಅವರು ಸೋಮವಾರ ರೇಣುಕಾಚಾರ್ಯ ಅವರ ಹೊನ್ನಾಳಿ ನಿವಾಸಕ್ಕೆ ಭೇಟಿ ನೀಡಿ ಮನವೊಲಿಕೆ ಪ್ರಯತ್ನ ನಡೆಸಿದ್ದರು. ಆದರೆ ಅವರು ತಮ್ಮ ಪಟ್ಟು ಸಡಲಿಸಿಲ್ಲ. ಅಭ್ಯರ್ಥಿಯನ್ನು ಬದಲಿಸಬೇಕೆಂಬ ತಮ್ಮ ನಿಲುವಿಗೆ ಬದ್ಧರಾಗಿದ್ದಾರೆ. ಈ ಬೆಳವಣಿಗೆ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಗೆ ನುಂಗಲಾರದ ತುತ್ತಾಗಿದೆ.
ಇಂದು ಮತ್ತೆ ಸಭೆ ನಡೆಸುವ ಯೋಜನೆಯಲ್ಲಿ ರೆಬೆಲ್ ನಾಯಕರಿದ್ದಾರೆ. ರಾಜ್ಯ ಹಾಗೂ ರಾಷ್ಟ್ರೀಯ ನಾಯಕರಿಂದ ನಿರೀಕ್ಷಿತ ಮಟ್ಟದ ಸ್ಪಂದನೆ ಸಿಗದ ಹಿನ್ನೆಲೆಯಲ್ಲಿ ಹಿರಿಯ ನಾಯಕರ ಫೋನ್ ಕರೆಗಾಗಿ ಬಂಡಾಯ ತಂಡ ಕಾದು ಕುಳಿತಿದೆ.