alex Certify ಬೇಸಿಗೆಯಲ್ಲಿ ಎಡವಿದ್ದನ್ನು ಮಳೆಗಾಲದಲ್ಲಿ ಕಿತ್ತು ಹಾಕಬೇಕೆಂಬ ಮಾತು ಇದೆ. ಅದೇ ರೀತಿ ಕಿತ್ತು ಹಾಕುತ್ತೇವೆ: ಮಾಜಿ ಸಚಿವ ರವೀಂದ್ರನಾಥ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬೇಸಿಗೆಯಲ್ಲಿ ಎಡವಿದ್ದನ್ನು ಮಳೆಗಾಲದಲ್ಲಿ ಕಿತ್ತು ಹಾಕಬೇಕೆಂಬ ಮಾತು ಇದೆ. ಅದೇ ರೀತಿ ಕಿತ್ತು ಹಾಕುತ್ತೇವೆ: ಮಾಜಿ ಸಚಿವ ರವೀಂದ್ರನಾಥ್

ದಾವಣಗೆರೆ: ಬಿಜೆಪಿಯಲ್ಲಿ ಈಗ ಯಾರ ಮಾತನ್ನು ಕೇಳುವುದಿಲ್ಲ, ಬರೀ ದುಡ್ಡಿದ್ದವರ ಮಾತನ್ನು ಮಾತ್ರ ಕೇಳುತ್ತಾರೆ ಎಂದು ಮಾಜಿ ಸಚಿವ ಎಸ್.ಎ. ರವೀಂದ್ರನಾಥ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, ಬೇಸಿಗೆಯಲ್ಲಿ ಎಡವಿದ್ದನ್ನು ಮಳೆಗಾಲದಲ್ಲಿ ಕಿತ್ತು ಹಾಕಬೇಕೆಂಬ ಮಾತು ಇದೆ. ಅದೇ ರೀತಿ ಕಿತ್ತು ಹಾಕುತ್ತೇವೆ ಎಂದು ಹೇಳಿದ್ದಾರೆ.

ಸಂಸದ ಜಿ.ಎಂ. ಸಿದ್ದೇಶ್ವರ್ ಮತ್ತು ಅವರ ಕುಟುಂಬಕ್ಕೆ ಟಿಕೆಟ್ ನೀಡಬೇಡಿ ಎಂದು ಹೇಳಿದ್ದೆವು. ಆದರೆ, ಈಗ ಸಂಸದ ಸಿದ್ದೇಶ್ವರ ಅವರ ಪತ್ನಿಗೆ ಟಿಕೆಟ್ ನೀಡಿದ್ದಾರೆ. ಇಷ್ಟರಲ್ಲೇ ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗಕ್ಕೆ ಬರಲಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿ ಅವರ ಗಮನಕ್ಕೆ ತರುತ್ತೇವೆ ಎಂದು ರವೀಂದ್ರನಾಥ್ ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...