alex Certify ತೆಪ್ಪ ಮಗುಚಿ ದುರಂತ; ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತೆಪ್ಪ ಮಗುಚಿ ದುರಂತ; ಮೀನು ಹಿಡಿಯಲು ಹೋಗಿದ್ದ ವ್ಯಕ್ತಿ ದುರ್ಮರಣ

ದಾವಣಗೆರೆ: ಮೀನು ಹಿಡಿಯಲೆಂದು ಹೋಗಿದ್ದ ವ್ಯಕ್ತಿ ತೆಪ್ಪ ಮಗುಚಿಬಿದ್ದು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ತುಪ್ಪದಹಳ್ಳಿ ಗ್ರಾಮದಲ್ಲಿ ನಡೆದಿದೆ.

40 ವರ್ಷದ ಮೂರ್ತಿ ಮೃತ ದುರ್ದೈವಿ. ಕೆರೆಯಲ್ಲಿ ಮೀನು ಹಿಡಿದು ಮಾರಾಟ ಮಾಡಿ ಜೀವನ ಸಾಗಿಸುತ್ತಿದ್ದರು. ಎಂದಿನಂತೆ ತೆಪ್ಪದಲ್ಲಿ ತೆರಳಿ ಮೀನು ಹಿಡಿಯಲು ಹೋಗಿದ್ದರು. ಈ ವೇಳೆ ಈ ದುರಂತ ಸಂಭವಿಸಿದೆ.

ತೆಪ್ಪ ಮಗುಚಿ ಬಿದ್ದ ಪರಿಣಾಮ ಮೀನಿಗೆ ಹಾಕಿದ್ದ ಬಲೆ ಕಾಲಿಗೆ ಸಿಲುಕಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಬಿಳಚೋಡು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...