
ದಾವಣಗೆರೆ: ದಾವಣಗೆರೆಯಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ನಡೆದಿದ್ದ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೆ 30 ಜನರನ್ನು ಬಂಧಿಸಲಾಗಿದೆ.
ಎಸ್ ಪಿ ಉಮಾ ಪ್ರಶಾಂತ್ ನೇತೃತ್ವದಲ್ಲಿ ರಾತ್ರಿಯಿಡಿ ಕಾರ್ಯಾಚರಣೆ ನಡೆಸಿ, ಮನೆಗಳಿಗೆ ನುಗ್ಗಿ ಕಿಡಿಗೇಡಿಗಳನ್ನು ಬಂಧಿಸಲಾಗಿದೆ. ಪ್ರಕರಣ ಸಂಬಂಧ ಒಟ್ಟು ನಾಲ್ಕು ಪೊಲೀಸ್ ಠಾಣೆಗಳಲ್ಲಿ ಐದು ಎಫ್ ಐ ಆರ್ ದಾಖಲಾಗಿದೆ ಎಂದು ಐಜಿಪಿ ರಮೇಶ್ ಬಾನೋತ್ ತಿಳಿಸಿದ್ದಾರೆ.
ವೆಂಕಟೇಶ್ವರ ವೃತ್ತದಲ್ಲಿ ನಡೆದ ಕಲ್ಲು ತೂರಾತ ಘಟನೆಯಲ್ಲಿ ಇಬ್ಬರು ಪೊಲೀಸ್ ಕಾನ್ಸ್ ಟೇಬಲ್ ಗಳು ಗಾಯಗೊಂಡಿದ್ದಾರೆ. ಇನ್ನು ನಗರದಲ್ಲಿ ಶಾಂಇ ಸಭೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಎಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದ್ದು, ಸದ್ಯ ಪರಿಸ್ಥಿತಿ ಸಹಜ ಸ್ಥಿತಿಯತ್ತ ಮರುಳಿತ್ತಿದೆ ಎಂದು ತಿಳಿಸಿದ್ದಾರೆ.