
ದಾವಣಗೆರೆ: ದಾವಣಗೆರೆಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ. ಮುಖ್ಯಮಂತ್ರಿ ಆದ ನಂತರ ದಾವಣಗೆರೆ ಜಿಲ್ಲೆಗೆ ಸಿದ್ದರಾಮಯ್ಯ ಅವರ ಮೊದಲ ಭೇಟಿ ಇದಾಗಿದೆ.
ಮಧ್ಯಾಹ್ನ 12.15 ಕ್ಕೆ ಹೆಲಿಕಾಪ್ಟರ್ ಮೂಲಕ ದಾವಣಗೆರೆ ನಗರದ ಎಂ.ಬಿ.ಎ ಗ್ರೌಂಡ್ ಹೆಲಿಪ್ಯಾಡ್ ಗೆ ಆಗಮಿಸಿ ಮಧ್ಯಾಹ್ನ 12.30 ಕ್ಕೆ ಜಿಲ್ಲಾ ಪಂಚಾಯತ್ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುವರು.
ನಂತರ ಶಿರಮಗೊಂಡನಹಳ್ಳಿಯ ಸುಧಾ ವಿರೇಂದ್ರ ಪಾಟೀಲ್ ಸಮುದಾಯ ಭವನದಲ್ಲಿ ವಿಶೇಷ ಅಧಿಕಾರಿ ವಿಜಯಕುಮಾರ್ ಪುತ್ರಿ ಮದುವೆಯಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 3:15ಕ್ಕೆ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳುವರು.