
ದಾವಣಗೆರೆ: ಕಾರು ಡ್ರೈವ್ ಮಾಡುವಾಗಲೇ ಹೃದಯಾಘಾತ ಸಂಭವಿಸಿ, ಸಚಿವ ಎಸ್.ಎಸ್.ಮಲ್ಲಿಕಾರ್ಜುನ ಅವರ ಆಪ್ತ ಗುತ್ತಿಗೆದಾರರೊಬ್ಬರು ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
42 ವರ್ಷದ ಸುರೇಶ್ ಪೈ ಮೃತ ಗುತ್ತಿಗೆದಾರ. ಕಾರು ಚಲಾಯಿಸುತ್ತಿದ್ದಾಗಲೇ ಏಕಾಏಕಿ ಹೃದಯಾಘಾತ ಸಂಭವಿಸಿದ್ದು, ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿ ಪಕ್ಕದ ಗೋಡೆಗೆ ಗುದ್ದಿದೆ. ಹೃದಾಯಾಘಾತದಿಂದ ಸುರೇಶ್ ಪೈ ಸಾವನ್ನಪ್ಪಿದ್ದಾರೆ.
ದಾವಣಗೆರೆ ನಗರದ ಈಶ್ವರ ಧ್ಯಾನ ಮಂದಿರದ ಬಳಿ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಪರಿಶೀಲನೆ ನಡೆಸಿದ್ದಾರೆ.