
ದಾವಣಗೆರೆ: ಅನಾರೋಗ್ಯದಿಂದ ಬೇಸತ್ತು ದಂಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆ ಜಿಲ್ಲೆಯಲ್ಲಿ ನಡೆದಿದೆ.
ನ್ಯಾಮತಿ ತಾಲೂಕಿನ ಮಲ್ಲಿಗೇನಹಳ್ಳಿ ಗ್ರಾಮದಲ್ಲಿ ಷಣ್ಮುಖಪ್ಪ (65) ಹಾಗೂ ಇಂದ್ರಮ್ಮ (50) ಆತ್ಮಹತ್ಯೆ ಮಾಡಿಕೊಂಡ ದಂಪತಿ. ದಂಪತಿಗೆ ಮಕ್ಕಳಿರಲಿಲ್ಲ. ಅಲ್ಲದೇ ಇತ್ತೀಚೆಗೆ ಇಬ್ಬರೂ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದರು.
ಇದರಿಂದ ತೀವ್ರವಾಗಿ ನೊಂದಿದ್ದ ದಂಪತಿ ಮನೆಯಲ್ಲಿಯೇ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತೀವ್ರ ಅಸ್ವಸ್ಥರಾಗಿದ್ದ ಇಬ್ಬರನ್ನೂ ಅಕ್ಕಪಕ್ಕದ ಮನೆಯವರು ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಷಣ್ಮುಖಪ್ಪ ಮಾರ್ಗ ಮಧ್ಯೆಯೇ ಕೊನೆಯುಸಿರೆಳೆದಿದ್ದರು. ಆಸ್ಪತ್ರೆಗೆ ದಾಕಲಾಗಿದ್ದ ಪತ್ನಿ ಇಂದ್ರಮ್ಮ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ನ್ಯಾಮತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.