alex Certify DAVANAGERE: ಸೆ.9 ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ‘ಲೋಕ ಅದಾಲತ್’ ಆಯೋಜನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

DAVANAGERE: ಸೆ.9 ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ‘ಲೋಕ ಅದಾಲತ್’ ಆಯೋಜನೆ

ರಾಷ್ಟ್ರೀಯ ಲೋಕ್‌ ಅದಾಲತ್‌ : ದ.ಕ 30,729, ಉಡುಪಿಯಲ್ಲಿ 20,444 ಪ್ರಕರಣ ಇತ್ಯರ್ಥ | udayavani

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದ ವತಿಯಿಂದ ದಾವಣಗೆರೆ ಜಿಲ್ಲೆಯ ಎಲ್ಲಾ ನ್ಯಾಯಾಲಯಗಳಲ್ಲಿ ಸೆಪ್ಟಂಬರ್ 9 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ.

ಸಾರ್ವಜನಿಕರು ಈ ಲೋಕ್ ಅದಾಲತ್‍ನಲ್ಲಿ ಚಾಲ್ತಿಯಲ್ಲಿರುವ ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಕಡಿಮೆ ಖರ್ಚಿನಲ್ಲಿ ಹಾಗೂ ರಾಜಿಯಾಗಬಲ್ಲ ಎಲ್ಲಾ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳು, ಮೋಟರ್ ವಾಹನ ಅಪಘಾತ ಪರಿಹಾರ ಕ್ರಮಗಳು, ಚೆಕ್ ಅಮಾನ್ಯ ಪ್ರಕರಣಗಳು, ಭೂ ಸ್ವಾಧೀನ ಪ್ರಕರಣಗಳು, ಬ್ಯಾಂಕ್ ಸಾಲ, ಎಂ.ಎಂ.ಡಿ.ಆರ್ ಕಾಯ್ದೆಯಡಿಯ ಪ್ರಕರಣಗಳನ್ನು ಬಗೆಹರಿಸಿಕೊಳ್ಳಬಹುದು.

ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು (ವಿಚ್ಛೇಧನ ಹೊರತುಪಡಿಸಿ) ಪಿಂಚಣಿ, ವೇತನ ಭತ್ಯೆ, ವಿದ್ಯುತ್ ಹಾಗೂ ನೀರಿನ ಶುಲ್ಕ, ಕೈಗಾರಿಕೆ ಕಾರ್ಮಿಕರ ವೇತನ, ಕಾರ್ಮಿಕ ವಿವಾದದ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ದಾವಣಗೆರೆ ಹಳೆಯ ನ್ಯಾಯಾಲಯ ಸಂಕೀರ್ಣದಲ್ಲಿರುವ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ ದೂ.08192296364, ತಾಲ್ಲೂಕು ಕಾನೂನು ಸೇವಾ ಸಮಿತಿ ಹರಿಹರ ದೂ.08192296885, ಹೊನ್ನಾಳಿ ದೂ.08188251732, ಚನ್ನಗಿರಿ ದೂ.08189229195 ಮತ್ತು ಜಗಳೂರು ದೂ.08196227600ಗೆ ಸಂಪರ್ಕಿಸಬಹುದೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ ಕರಣ್ಣವರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...