ದಾವಣಗೆರೆ: ದಾವಣಗೆರೆಯಲ್ಲಿ ಡಿಸೆಂಬರ್ 23, 24ರಂದು ಅಖಿಲ ಭಾರತ ವೀರಶೈವ ಮಹಾಸಭೆಯ ಮಹಾ ಅಧಿವೇಶನ ನಡೆಯಲಿದೆ.
ಮಹಾಸಭಾ ಅಧ್ಯಕ್ಷ, ಶಾಸಕ ಶ್ಯಾಮನೂರು ಶಿವಶಂಕರಪ್ಪ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ವೀರಶೈವ ಲಿಂಗಾಯತ ಸಮುದಾಯವನ್ನು ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸಬೇಕು ಎಂದು ಒತ್ತಾಯಿಸಿದ್ದಾರೆ.
ಜಾತಿ ಗಣತಿ ಬಗ್ಗೆ ವೀರಶೈವ ಮಹಾ ಅಧಿವೇಶನದಲ್ಲಿ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗುವುದು. ಜಾತಿಗಣತಿ ಬೇಕಿದ್ದರೆ ಸಿಎಂ ಸಿದ್ದರಾಮಯ್ಯ ಮಾಡಲಿ, ನಮಗೆ ಬೇಸರವಿಲ್ಲ. ವೀರಶೈವ ಮಹಾ ಅಧಿವೇಶನದಲ್ಲಿ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಕನಿಷ್ಠ ಮೂರರಿಂದ ನಾಲ್ಕು ಲಕ್ಷ ಜನ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ವೀರಶೈವ ಪರಂಪರೆಯ ಎಲ್ಲಾ ಸ್ವಾಮೀಜಿಗಳು ಮಹಾ ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ. ಸಮಾವೇಶದ ಬಗ್ಗೆ ಜನರಿಗೆ ಮಾಹಿತಿ ನೀಡಲು ಪ್ರಚಾರ ವಾಹನಕ್ಕೆ ಈಗಾಗಲೇ ಚಾಲನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಚಿತ್ರದುರ್ಗ ಮುರುಘಾ ಮಠದ ಸ್ವಾಮೀಜಿ ಆರೋಪ ಮುಕ್ತರಾಗಿ ಬರಲಿ. ಆಗ ಅವರನ್ನು ಅಧಿವೇಶನಕ್ಕೆ ಕರೆಯುವ ಬಗ್ಗೆ ಚಿಂತನೆ ಮಾಡಲಾಗುವುದು ಎಂದು ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.