ದಾವಣಗೆರೆ: ನಿರ್ಮಾಣ ಹಂತದ ಕಟ್ಟಡದ ಪಿಲ್ಲರ್ ಕುಸಿದು ಇಬ್ಬರು ಸಾವು ಕಂಡ ಘಟನೆ ದಾವಣಗೆರೆ ಸಮೀಪದ ಕುಕ್ಕವಾಡ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿದೆ.
ಶಾಸಕ ಶಾಮನೂರು ಶಿವಶಂಕರಪ್ಪ ಕುಟುಂಬದ ಒಡೆತನದ ಕಾರ್ಖಾನೆ ಇದಾಗಿದೆ. ಎಥೆನಾಲ್ ಘಟಕಕ್ಕೆ ನಿರ್ಮಿಸುತ್ತಿದ್ದ ಕಟ್ಟಡದ ಪಿಲ್ಲರ್ ಕುಸಿದು ಅವಘಡ ಸಂಭವಿಸಿದೆ. ಆರು ಜನರು ಗಾಯಗೊಂಡಿದ್ದು, ಗಾಯಾಳುಗಳನ್ನು ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹದಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.