
ದಾವಣಗೆರೆ: ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಅವಘಡ ಸಂಭವಿಸಿದ್ದು, ಕಿರಾಣಿ ಅಂಗಡಿ ಸುಟ್ಟು ಕರಕಲಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ಬಳಿ ನಡೆದಿದೆ.
ಇಲ್ಲಿನ ಹನುಮಂತಾಪುರ ಗೊಲ್ಲರ ಹಟ್ಟಿಯಲ್ಲಿ ಕಿರಾಅಣಿ ಅಂಗಡಿಯಲ್ಲಿ ಇಡಲಾಗಿದ್ದ ಸಿಲಿಂಡರ್ ಸೋರಿಕೆಯಾಗಿ ಬೆಂಕಿ ಹೊತ್ತಿಕೊಂಡಿದೆ. ಅಂಗಡಿಯಲ್ಲಿದ್ದವರು ತಕ್ಷಣ ಹೊರಗೋಡಿ ಬಂದು ಜೀವ ಉಳಿಸಿಕೊಂಡಿದ್ದಾರೆ. ನೋಡ ನೋಡುತ್ತಿದ್ದಂತೆ ಬೆಂಕಿ ಅವಘಡಕ್ಕೆ ಇಡೀ ಅಂಗಡಿ ಹೊತ್ತಿ ಉರಿದಿದೆ.
ಕುಮಾರ್ ಎಂಬುವವರಿಗೆ ಸೇರಿದ ಅಂಗಡಿ ಇದಾಗಿತ್ತು. ಘಟನಾ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಜಗಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ