
ದಾವಣಗೆರೆ: ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕು ಚಳಗೇರಿ ಮಠದ ಶ್ರೀಗಳು ಲಿಂಗೈಕ್ಯರಾಗಿದ್ದಾರೆ. ಚಳಗೇರಿ ವೀರಶೈವ ಜಂಗಮ ಕಟ್ಟಿಗೆಹಳ್ಳಿ ಮಠದ ಸ್ವಾಮೀಜಿ ಡಾ. ಮಹಾಂತೇಶ್ವರ ಮಹಾಸ್ವಾಮಿಗಳು ಇಂದು ರಾತ್ರಿ ಲಿಂಗೈಕ್ಯರಾಗಿದ್ದಾರೆ.
ಅನಾರೋಗ್ಯದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಇಂದು ರಾತ್ರಿ 8.35 ರ ವೇಳೆಗೆ ಲಿಂಗೈಕ್ಯರಾಗಿದ್ದಾರೆ. ಶ್ರೀಗಳ ನಿಧನಕ್ಕೆ ಭಕ್ತರು ಕಂಬನಿ ಮಿಡಿದಿದ್ದಾರೆ. ನಾಳೆ ಮಠದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು.