![](https://kannadadunia.com/wp-content/uploads/2023/12/bp-harish.jpg)
ದಾವಣಗೆರೆ: ಬಿಜೆಪಿ ಶಾಸಕರೊಬ್ಬರು ಸರ್ಕಾರಿ ಅಧಿಕಾರಿಗಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ನಡೆದಿದೆ.
ಶಾಸಕ ಬಿ.ಪಿ.ಹರೀಶ್, ಕಾಮಗಾರಿ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಮಾತನಾಡುತ್ತ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ.
ಹರಿಹರ ತುಂಗಭದ್ರಾ ಸೇತುವೆಯಿಂದ ಗಾಂಧಿ ಮೈದಾನದವರೆಗೆ ರಸ್ತೆ ಅಗಲೀಕರಣ ಕಾಮಗಾರಿ ವಿಚಾರವಾಗಿ ಶಾಸಕ ಹರೀಶ್ ಅವರು ಲೋಕೋಪಯೋಗಿ ಇಲಾಖೆ ಇಂಜಿನಿಯರ್ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.