ದಾವಣಗೆರೆ: ಕಳೆದ 7 ತಿಂಗಳಲ್ಲಿ 135 ಸ್ನವಜಾತ ಶಿಶುಗಳು, 28 ಗರ್ಭಿಣಿಯರು ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ನಡೆದಿದ್ದು, ಜನರನ್ನು ಆತಂಕಕ್ಕೀಡು ಮಾಡಿದೆ.
ದಾವಣಗೆರೆ ಜಿಲ್ಲಾಸ್ಪತ್ರೆಗೆ ಸುತ್ತಮುತಲಿನ ನಾಲ್ಕೈದು ಜಿಲ್ಲೆಯ ಸಾವಿರಾರು ರೋಗಿಗಳು ಬಂದು ಚಿಕಿತ್ಸೆ ಪಡೆಯುತ್ತಾರೆ. ಆದರೆ ಆಸ್ಪತ್ರೆಯಲ್ಲಿ ಕಳೆದ 7 ತಿಂಗಳಿಂದ ಶಿಶುಗಳ ಹಾಗೂ ಗರ್ಭಿಣಿಯರ ಸಾವಿನ ಸಂಖ್ಯೆ ಬೆಚ್ಚಿ ಬೀಳಿಸುವಂತಿದೆ.
ಜಿಲ್ಲೆಯಲ್ಲಿ ನವಜಾತ ಶಿಶುಗಳ ಮರಣ ಪ್ರಮಾಣ ಹೆಚ್ಚಿದೆ. ಗರ್ಭಿಣಿಯರ ಸಾವಿನ ಸಂಖ್ಯೆಯೂ ಹೆಚ್ಚಾಗಿದೆ. ಜಿಲ್ಲಾಸ್ಪತ್ರೆ ನೀಡಿರುವ ವರದಿ ನೋಡಿ ಆರೋಗ್ಯ ಸಚಿವರೇ ಶಾಕ್ ಆಗಿದ್ದಾರೆ.
ಪ್ರತಿ ತಿಂಗಳು 600-700 ಹೆರಿಗೆ ಆಗುವ ಜಿಲ್ಲಾಸ್ಪತ್ರೆಯಲ್ಲಿ ನವಜಾತ ಶಿಶುಗಳ ಸಾವು ಹೆಚ್ಚುತ್ತಿದೆ. ಮುಂಚಿತವಾಗಿಯೇ ಗರ್ಭಿಣಿಯರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುವಂತೆ ಸೂಚಿಸಲಾಗಿದೆ.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಗ್ಯಾಧಿಕಾರಿಗಳು ಹಾಗೂ ವೈದ್ಯರ ಜೊತೆ ಸಭೆ ನಡೆಸಿದ್ದು, ಜಿಲ್ಲಾಸ್ಪತ್ರೆಯಲ್ಲಿ ಯಾವುದೇಸೌಲಭ್ಯ ಕೊರತೆಯಾಗದಂತೆ ನೋಡಿಕೊಳ್ಳುವಂತೆ ಸೂಚಿಸಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಸಿಜೇರಿಯನ್ ಡೆಲಿವರಿಗಳು ಶೇ.75ರಷ್ಟು ಜಾಸ್ತಿಯಾಗಿದೆ. ಈ ಬಗ್ಗೆಯೂ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.