ದಾವಣಗೆರೆ: ರಾಜ್ಯದಲ್ಲಿ ಹೊಸ ಮರಳು ನೀತಿ ಜಾರಿಗೆ ಚಿಂತನೆ ನಡೆದಿದೆ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ತಿಳಿಸಿದ್ದಾರೆ.
ದಾವಣಗೆರೆಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗಣಿಗಾರಿಕೆಯಿಂದಾಗಿ ಕಳೆದ ವರ್ಷ 6 ಸಾವಿರ ಕೋಟಿ ರೂಪಾಯಿ ಆದಾಯ ಬಂದಿತ್ತು. ಈ ವರ್ಷ 9 ಸಾವಿರ ಕೋಟಿ ರೂಪಾಯಿ ಆದಾಯ ಬರುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ ತಡೆಯುವ ನಿಟ್ಟಿನಲ್ಲಿ ಅನೇಕ ಕ್ರಮ ಕೈಗೊಂಡಿದ್ದು, ಯೋಜನೆ ರೂಪಿಸಲಾಗಿದೆ. ವಾಹನಗಳಿಗೆ ಜಿಪಿಎಸ್ ಅಳವಡಿಸುವ ಮೂಲಕ ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಲಾಗುತ್ತಿದೆ. ಹೊಸ ಮರಳು ನೀತಿ ಜಾರಿಗೆ ಚಿಂತನೆ ನಡೆದಿದೆ ಎಂದು ಸಚಿವರು ತಿಳಿಸಿದ್ದಾರೆ.