ದಾವಣಗೆರೆ: ಗ್ರಾಹಕರಿಂದ ಹೆಚ್ಚುವರಿಯಾಗಿ ಪೇಪರ್ ಬ್ಯಾಗ್ ಗೆ 10 ರೂ. ಪಡೆದುಕೊಂಡ ನಗರದ ಶಾಪಿಂಗ್ ಮಾಲ್ ಗೆ 7000 ರೂ. ದಂಡ ವಿಧಿಸಲಾಗಿದೆ.
ವಕೀಲ ಆರ್. ಬಸವರಾಜ್ ಅವರು ದಾವಣಗೆರೆ ನಗರದ ಮ್ಯಾಕ್ಸ್ ರೀಟೈಲ್ ಅಂಗಡಿಯಲ್ಲಿ 2023 ರ ಅಕ್ಟೋಬರ್ 29 ರಂದು 1,499 ರೂ. ಪಾವತಿಸಿ, ಡೆನಿವಾ ಪ್ಯಾಂಟ್ ಖರೀದಿಸಿದರು. ಈ ವೇಳೆಯಲ್ಲಿ ಇಲ್ಲಿಯೇ ಲೈಫ್ ಸ್ಟೈಲ್ ಇಂಟರ್ ನ್ಯಾಷನಲ್ ವಾಣಿಜ್ಯ ಸಂಸ್ಥೆ ಪ್ಯಾಂಟ್ ಮಾರಾಟದ ವೇಳೆ ಹೆಚ್ಚುವರಿಯಾಗಿ 10 ರೂ. ಪೇಪರ್ ಬ್ಯಾಗ್ ಗೆ ಪಡೆಯಲಾಯಿತು.
ಗ್ರಾಹಕ ಆರ್. ಬಸವರಾಜ್ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ವಾಣಿಜ್ಯ ಸಂಸ್ಥೆ ವಿರುದ್ದ 50,000 ರೂ. ಮಾನಸಿಕ ಕಿರುಕುಳ ಹಾಗೂ ದೂರು ದಾಖಲಿಸಲು ಖರ್ಚು ಮಾಡಿದ ಮೊತ್ತ 10,000 ರೂ. ಪಾವತಿಸುವಂತೆ ದೂರು ದಾಖಲಿಸಿದ್ದರು.
ವಾಣಿಜ್ಯ ಸಂಸ್ಥೆಗೆ ನೋಟಿಸ್ ಜಾರಿ ಮಾಡಿದ್ದು, ಈ ಸಂಸ್ಥೆ ವಕೀಲರ ಮುಖಾಂತರ ಹಾಜರಾಗಿ ಬ್ಯಾಗ್ ಗೆ ಹೆಚ್ಚುವರಿಯಾಗಿ ಪಡೆದ ಹಣ ಸಮರ್ಥಿಸಿಕೊಂಡಿತ್ತು. ಆದರೆ ಗ್ರಾಹಕರ ಆಯೋಗ ಈ ಮೊದಲು ರಾಷ್ಟ್ರೀಯ ಗ್ರಾಹಕರ ಆಯೋಗ ಬಿಗ್ ಬಜಾರ್ ವಿರುದ್ಧ ಸಾಯಲ್ ದಾವ ಪ್ರಕರಣದ ನ್ಯಾಯ ನಿರ್ಣಯದ ತೀರ್ಪಿನ ಅನುಗುಣವಾಗಿ ವಾಣಿಜ್ಯ ಸಂಸ್ಥೆಗಳು ಕ್ಯಾರಿ ಬ್ಯಾಗ್ ಗಳಿಗೆ ಹೆಚ್ಚಿನ ಹಣವನ್ನು ಪಡೆಯುವಂತಿಲ್ಲ ಎಂಬ ತೀರ್ಪನ್ನು ಉಲ್ಲೇಖಿಸಿ ಹೆಚ್ಚುವರಿಯಾಗಿ 10 ರೂ. ಪಡೆದ ಸಂಸ್ಥೆಯ ಕ್ರಮವು ಗ್ರಾಹಕರ ಸಂರಕ್ಷಣಾ ಕಾಯ್ದೆಯ ಅಡಿಯಲ್ಲಿ ಅನುಚಿತ ವ್ಯಾಪಾರ ಪದ್ದತಿಯೆಂದು ಪರಿಗಣಿಸಿ ದಾವಣಗೆರೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಮಹಂತೇಶ ಈರಪ್ಪ ಶಿಗ್ಲಿ, ಸದಸ್ಯರಾದ ತ್ಯಾಗರಾಜನ್ ಮತ್ತು ಬಿ.ಯು. ಗೀತಾ ಇವರು ವಾಣಿಜ್ಯ ಸಂಸ್ಥೆಗೆ 7000 ದೂರು ದಾಖಲಿಸಿ ದಂಡವಿದಿಸಿ ಆದೇಶಿಸಿದೆ.