![](https://kannadadunia.com/wp-content/uploads/2022/08/indian-flag-1.jpeg)
ದಾವಣಗೆರೆ; ಗಣರಾಜ್ಯೋತ್ಸವದಲ್ಲಿ ಪ್ಲಾಸ್ಟಿಕ್ ರಾಷ್ಟ್ರಧ್ವಜಗಳ ಮಾರಾಟ ಹಾಗೂ ಬಳಕೆ ನಿಷೇಧಿಸಲಾಗಿದೆ ಎಂದು ಪರಿಸರ ಅಧಿಕಾರಿ ರಾಜಶೇಖರ್ ಪುರಾಣಿಕ್ ತಿಳಿಸಿದ್ದಾರೆ
ಪರಿಸರ ಸ್ನೇಹಿಯಾಗಿ ಆಚರಿಸಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೋರಲಾಗಿದೆ. ಪ್ಲಾಸ್ಟಿಕ್ ಧ್ವಜಗಳನ್ನು ಮಾರಾಟ ಮಾಡುವಂತಹ ಅಂಗಡಿಗಳು ಕಂಡುಬಂದರೆ ಅಂತಹವರ ವಿರುದ್ಧ ಪ್ಲಾಸ್ಟಿಕ್ ಅಧಿನಿಯಮ ಹಾಗೂ ಪರಿಸರ ಸಂರಕ್ಷಣಾ ಕಾಯ್ದೆಯಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.