ಬೆಂಗಳೂರು: ನಾಳೆ ದಾವೋಸ್ ನಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಪಸಾಗಲಿದ್ದಾರೆ. ದುಬೈ ಮಾರ್ಗವಾಗಿ ಸಿಎಂ ಬೆಂಗಳೂರಿಗೆ ವಾಪಸಾಗಲಿದ್ದಾರೆ.
ನಾಳೆ ಬೆಳಗ್ಗೆ 9.05 ಗಂಟೆಗೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಲಿದ್ದಾರೆ. ಮಧ್ಯಾಹ್ನ 12.30 ಕ್ಕೆ ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳು ಸುದ್ದಿಗೋಷ್ಠಿ ನಡೆಸಲಿದ್ದಾರೆ. ಸುದ್ದಿಗೋಷ್ಠಿಯಲ್ಲಿ ವಿಶ್ವ ಆರ್ಥಿಕ ಶೃಂಗಸಭೆಯ ಫಲಶೃತಿ ಬಗ್ಗೆ ಅವರು ಮಾಹಿತಿ ನೀಡಲಿದ್ದಾರೆ. ಕಳೆದ ಭಾನುವಾರ ಅವರು ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಭಾಗವಹಿಸಲು ದಾವೋಸ್ ಗೆ ಭೇಟಿ ನೀಡಿದ್ದರು. ರಾಜ್ಯದಲ್ಲಿ ಹೂಡಿಕೆಗೆ ಬಂಡವಾಳ ಹರಿದುಬಂದಿರುವ ಬಗ್ಗೆ ಸಿಎಂ ಮಾಹಿತಿ ಹಂಚಿಕೊಳ್ಳಲಿದ್ದಾರೆ.