alex Certify ಮದುವೆಗೆ ಸಿದ್ಧತೆ ಮಾಡಿಕೊಂಡಿದ್ದವರಿಗೆ ಬಿಗ್ ಶಾಕ್: ಮದುವೆ ನಿಷೇಧಿಸಿ ಆದೇಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆಗೆ ಸಿದ್ಧತೆ ಮಾಡಿಕೊಂಡಿದ್ದವರಿಗೆ ಬಿಗ್ ಶಾಕ್: ಮದುವೆ ನಿಷೇಧಿಸಿ ಆದೇಶ

ಧಾರವಾಡ: ಧಾರವಾಡ ಜಿಲ್ಲೆಯಲ್ಲಿ ಮೇ 17 ರಿಂದ 24 ರ ವರೆಗೆ ಮದುವೆ ಆಯೋಜಿಸುವದನ್ನು ನಿಷೇಧಿಸಿ ಜಿಲ್ಲಾಧಿಕಾರಿ ನಿತೇಶ ಪಾಟೀಲ ಆದೇಶ ಹೊರಡಿಸಿದ್ದಾರೆ.

ಜಿಲ್ಲೆಯಲ್ಲಿ ಹೆಚ್ಚಿನ ಸಂಖ್ಯೆಗಳಲ್ಲಿ ಮದುವೆ ಸಮಾರಂಭಗಳು ಜರುಗುತ್ತಿದ್ದು, ಸಾರ್ವಜನಿಕರು ಹೆಚ್ಚಾಗಿ ಪಾಲ್ಗೊಂಡು ಕೋವಿಡ್-19 ರ ಮಾರ್ಗಸೂಚಿಗಳನ್ನು ಸರಿಯಾಗಿ ಪಾಲಿಸದೆ ಇರುವುದರಿಂದ ಕೋವಿಡ್-19 ರ ಸೋಂಕು ಹೆಚ್ಚಾಗಿ ಹರಡುತ್ತಿರುವುದು ಕಂಡುಬರುತ್ತಿದೆ. ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವದರಿಂದ ಮೇ.17 ರಿಂದ 24 ರವರೆಗೆ ಧಾರವಾಡ ಜಿಲ್ಲೆಯಲ್ಲಿ ಮದುವೆ ಕಾರ್ಯಕ್ರಮಗಳನ್ನು ನಿಷೇಧಿಸಲಾಗಿದೆ.

ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕೋರೊನಾ ಸೋಂಕು ನಿಯಂತ್ರಣಕ್ಕಾಗಿ ಜಿಲ್ಲಾಡಳಿತ ಸತತವಾಗಿ ಶ್ರಮಿಸುತ್ತಿದ್ದರೂ ಸಾರ್ವಜನಿಕರ ಸಹಕಾರದಿಂದ ಮಾತ್ರ ಸೋಂಕು ಹರಡುವುದನ್ನು ತಡೆಗಟ್ಟಲು ಸಾಧ್ಯವಾಗುತ್ತದೆ.

ಜಿಲ್ಲಾ ಪಂಚಾಯತ ಸಹಯೋಗದಲ್ಲಿ ಗ್ರಾಮ ಮಟ್ಟದಲ್ಲಿ ಕೋವಿಡ್ ಜನಜಾಗೃತಿ ಮೂಡಿಸುವ ಕಾರ್ಯವನ್ನು ಯಶಸ್ವಿಯಾಗಿ ನಿರ್ವಹಿಸಲಾಗಿದೆ. ಬೇರೆ ಜಿಲ್ಲೆ, ನಗರ, ಇತರ ಪ್ರದೇಶಗಳಿಂದ ವಲಸೆ ಬಂದವರು ಮುನ್ನೆಚ್ಚರಿಕೆ ವಹಿಸದೆ ಇರುವದರಿಂದ ಗ್ರಾಮಗಳಲ್ಲಿ ಕೋವಿಡ್ ಸೋಂಕು ಹೆಚ್ಚುವ ಸಾಧ್ಯತೆ ಇರುವದರಿಂದ ಮುಂಜಾಗೃತೆ ವಹಿಸಿ, ಕ್ರಮಕೈಗೊಳ್ಳುವ ಅಗತ್ಯವಿದೆ.

ಸಾರ್ವಜನಿಕರ ಹಿತದೃಷ್ಟಿಯಿಂದ ಮತ್ತು ಸಾರ್ವಜನಿಕರ ಆರೋಗ್ಯ ಸುರಕ್ಷತೆ ಮುಖ್ಯವಾಗಿರುವುದರಿಂದ ಮೇ 17 ರಿಂದ 24 ರ ವರೆಗೆ ಜಿಲ್ಲೆಯಲ್ಲಿ ಮದುವೆ ಆಯೋಜನೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಈಗಾಗಲೇ ಮದುವೆ ಆಯೋಜನೆಗೆ ಅನುಮತಿ ಪಡೆದಿರುವ ಕುಟುಂಬದವರು ಕೋವಿಡ್ ಮಾರ್ಗಸೂಚಿ ಪ್ರಕಾರ ಮದುವೆ ಕಾರ್ಯವನ್ನು ನೇರವೆರಿಸಬಹುದು. ಮತ್ತು ಈಗಾಗಲೇ ಜಿಲ್ಲಾಡಳಿತದಿಂದ ಅನುಮತಿ ಪಡೆದ ಮದುವೆ ಸಮಾರಂಭಗಳಿಗೆ ಈ ಆದೇಶ ಅನ್ವಯಿಸುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಸಾರ್ವಜನಿಕರು ಈ ಆದೇಶ ಉಲ್ಲಂಘಿಸಿದಲ್ಲಿ ಮತ್ತು ನಿಯಮಗಳನ್ನು ಪಾಲಿಸದೆ ಇದ್ದಲ್ಲಿ ಅಂತವರ ವಿರುದ್ದ ಸಾಂಕ್ರಾಮಿಕ ರೋಗ ನಿಯಂತ್ರಣ ಕಾಯ್ದೆ 1897 ಮತ್ತು ದಿ ಕರ್ನಾಟಕ ಸಾಂಕ್ರಾಮಿಕ ರೋಗ ಕೋವಿಡ್-19 ನಿಯಮಗಳು-2020 ರನ್ವಯ ಪ್ರಕರಣ ದಾಖಲಿಸಿ, ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗುವುದೆಂದು ಆದೇಶದಲ್ಲಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...