ಬೆಂಗಳೂರು: ರಾಜ್ಯದಾದ್ಯಂತ ಮಳೆಯ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮಕ್ಕೆ ವಿನಾಯಿತಿ ನೀಡಲಾಗಿದೆ.
8 ಜಿಲ್ಲೆಗಳಲ್ಲಿ ಅಭಿಯಾನಕ್ಕೆ ತಾತ್ಕಾಲಿಕ ವಿನಾಯಿತಿ ನೀಡಿ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ. ಪ್ರತಿ ತಿಂಗಳು ಮೂರನೇ ಶನಿವಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ನಡೆಯುತ್ತಿತ್ತು. ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಅವಾಂತರ ಸೃಷ್ಟಿಯಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ನಡೆ ಕಾರ್ಯಕ್ರಮಕ್ಕೆ ವಿನಾಯಿತಿ ನೀಡಲಾಗಿದೆ.
ಮಳೆಯ ಆರ್ಭಟ ಮುಂದುವರೆದ ಹಿನ್ನೆಲೆಯಲ್ಲಿ ಎಂಟು ಜಿಲ್ಲೆಗಳಲ್ಲಿ ತಾತ್ಕಾಲಿಕ ವಿನಾಯಿತಿ ನೀಡಿ ಸರ್ಕಾರದಿಂದ ಸುತ್ತೋಲೆ ಹೊರಡಿಸಲಾಗಿದೆ. ಜುಲೈ ತಿಂಗಳ ಅಭಿಯಾನಕ್ಕೆ ಸರ್ಕಾರ ವಿನಾಯಿತಿ ನೀಡಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಕೊಡಗು, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಜಿಲ್ಲೆಗಳಲ್ಲಿ ವಿನಾಯಿತಿ ನೀಡಲಾಗಿದೆ. ಜುಲೈ 16 ರಂದು ನಡೆಯಬೇಕಿರುವ ಜಿಲ್ಲಾಧಿಕಾರಿಗಳ ಅಭಿಯಾನಕ್ಕೆ ವಿನಾಯಿತಿ ನೀಡಲಾಗಿದ್ದು, ಉಳಿದ ಜಿಲ್ಲೆಗಳಲ್ಲಿ ನಿಗದಿಯಂತೆ ಅಭಿಯಾನ ಮುಂದುವರೆಯಲಿದೆ.