
ಬೆಂಗಳೂರು: ದಿಢೀರ್ ಬೆಳವಣಿಗೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಅವರನ್ನು ವರ್ಗಾವಣೆ ಮಾಡಲಾಗಿದೆ.
ಅವರ ಸ್ಥಾನಕ್ಕೆ ಲಕ್ಷ್ಮಿಕಾಂತ್ ರೆಡ್ಡಿ ಅವರನ್ನು ನೇಮಕ ಮಾಡಲಾಗಿದೆ. ಈ ಹಿಂದೆ ಮೈಸೂರು ಮಹಾನಗರ ಪಾಲಿಕೆ ಆಯುಕ್ತರಾಗಿ ಲಕ್ಷ್ಮಿಕಾಂತ್ ರೆಡ್ಡಿ ಕಾರ್ಯ ನಿರ್ವಹಿಸಿದ್ದರು. ಈಗ ಮೈಸೂರು ಜಿಲ್ಲಾಧಿಕಾರಿಯಾಗಿ ಅವರನ್ನು ನಿಯೋಜಿಸಲಾಗಿದೆ. ಮುಡಾ ಹಗರಣ ವಿಚಾರ ಭಾರೀ ಸಂಚಲನ ಮೂಡಿಸಿರುವ ಹೊತ್ತಲ್ಲೇ ಮೈಸೂರು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಅವರನ್ನು ಸರ್ಕಾರ ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.