ಕಲಬುರಗಿ: ಕಲ್ಬುರ್ಗಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಸಭ್ಯವರ್ತನೆ ಆರೋಪದ ಮೇಲೆ ರೈತ ಮುಖಂಡರು ಸೇರಿದಂತೆ 20 ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಕಲ್ಬುರ್ಗಿ ಜಿಲ್ಲಾಧಿಕಾರಿ ಯಶವಂತ್ ಗುರಿಕಾರ್ ಅವರ ಸೂಚನೆ ಮೇರೆಗೆ ವಶಕ್ಕೆ ಪಡೆದುಕೊಳ್ಳಲಾಗಿದೆ. ಜಿಲ್ಲಾಧಿಕಾರಿ ಕಚೇರಿ ಮುಂದೆ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ಚಿತ್ತಾಪುರದ ಓರಿಯಂಟ್ ಸಿಮೆಂಟ್ ಕಾರ್ಖಾನೆ ವಿರುದ್ಧ ಪ್ರತಿಭಟನೆ ನಡೆಸಿ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಲು ಅವರ ಕೊಠಡಿಗೆ ತೆರಳಿದ್ದ ವೇಳೆಯಲ್ಲಿ ರೈತ ಮುಖಂಡರು ಮತ್ತು ಡಿಸಿ ನಡುವೆ ಮಾತಿನ ಚಕಮಕಿ ನಡೆದಿದೆ.
ಸರ್ಕಾರಿ ಕರ್ತವ್ಯಕ್ಕೆ ಅಡ್ಡಿ ಹಾಗೂ ಜಿಲ್ಲಾಧಿಕಾರಿಯವರೊಂದಿಗೆ ಅಸಭ್ಯವರ್ತನೆ ಆರೋಪದಲ್ಲಿ 20 ಜನರನ್ನು ಸ್ಟೇಷನ್ ಬಜಾರ್ ಠಾಣೆಯ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆನ್ನಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.