ಬೆಂಗಳೂರು: ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆಗೆ ಬಳಿಕ ಜಿಲ್ಲಾಧಿಕಾರಿಗಳು ತಾಲೂಕು ಕಚೇರಿಗೆ ಭೇಟಿ ನೀಡಲು ಕಂದಾಯ ಇಲಾಖೆಯಿಂದ ಯೋಜನೆ ರೂಪಿಸಲಾಗಿದೆ.
ಕಂದಾಯ ಇಲಾಖೆಯಿಂದ ಪ್ರತಿ ಮಂಗಳವಾರ ಜಿಲ್ಲಾಧಿಕಾರಿಗಳು ತಾಲೂಕು ಕಚೇರಿಗೆ ಭೇಟಿ ನೀಡಲು ಯೋಜನೆ ರೂಪಿಸಲಾಗಿದೆ. ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಡಿಸಿಗಳು ತಾಲೂಕು ಕಚೇರಿ ಭೇಟಿ ಕುರಿತು ವೇಳಾಪಟ್ಟಿ ಸಿದ್ಧಪಡಿಸಲಾಗಿದೆ. ಕಂದಾಯ ಸಚಿವ ಆರ್. ಅಶೋಕ್ ಅವರೇ ಖುದ್ದು ವೇಳಾಪಟ್ಟಿಯನ್ನು ಸಿದ್ಧಪಡಿಸಿದ್ದಾರೆ.
ಗ್ರಾಮ ವಾಸ್ತವ್ಯದ ಮೂಲಕ ಗ್ರಾಮೀಣ ಜನರಿಗೆ ಹತ್ತಿರವಾಗುತ್ತಿರುವ ಸಚಿವ ಅಶೋಕ್ ಅವರು ಎಲ್ಲ ಜಿಲ್ಲಾಧಿಕಾರಿಗಳು ಪ್ರತಿ ಮಂಗಳವಾರ ತಾಲೂಕು ಕಚೇರಿಗೆ ತೆರಳುವಂತೆ ವೇಳಾಪಟ್ಟಿ ನಿಗದಿಪಡಿಸಿದ್ದಾರೆ. ಮೇ 31 ರಿಂದ ಆಗಸ್ಟ್ 16 ರ ವರೆಗಿನ ವೇಳಾಪಟ್ಟಿ ಸಿದ್ಧವಾಗಿದೆ. ಇನ್ನು ಮುಂದೆ ಪ್ರತಿ ಮಂಗಳವಾರ ತಾಲ್ಲೂಕು ಕಚೇರಿಗಳಲ್ಲಿಯೂ ಜಿಲ್ಲಾಧಿಕಾರಿಗಳು ಲಭ್ಯವಿರುತ್ತಾರೆ. ತಿಂಗಳ ಮೂರನೇ ಶನಿವಾರ ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ ನಡೆಯಲಿದ್ದು, ಪ್ರತಿ ಮಂಗಳವಾರ ಜಿಲ್ಲೆಯ ಒಂದು ತಾಲೂಕು ಕಚೇರಿಗೆ ಜಿಲ್ಲಾಧಿಕಾರಿಗಳು ಭೇಟಿ ನೀಡಲಿದ್ದಾರೆ ಎಂದು ಹೇಳಲಾಗಿದೆ.