ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳ ದ್ವಿತೀಯ ದರ್ಜೆ ಸಹಾಯಕರು ಮತ್ತು ಬಿಲ್ ಕಲೆಕ್ಟರ್ ಹುದ್ದೆಗಳ ನೇಮಕಾತಿ ವಿಧಾನ ಬದಲಿಸಿದೆ.
ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಲ್ಲಿ ಹೊಸ ನೇಮಕಾತಿ ನಿಯಮ ಜಾರಿಯಾಗಲಿದ್ದು, ದ್ವಿತೀಯ ದರ್ಜೆ ಸಹಾಯಕರು ಮತ್ತು ಬಿಲ್ ಕಲೆಕ್ಟರ್ ಹುದ್ದೆಗಳಿಗೆ ಪರೀಕ್ಷೆ ಇರುವುದಿಲ್ಲ. ನೇರ ನೇಮಕಾತಿ ಮೂಲಕ ಆಯ್ಲೆ ಮಾಡಿಕೊಳ್ಳಲಾಗುವುದು. ಜಿಲ್ಲಾಧಿಕಾರಿಗಳ ಸಮಿತಿ ಆಯ್ಕೆ ತೀರ್ಮಾನ ಕೈಗೊಳ್ಳಲಿದೆ.
ಲೋಕಸೇವಾ ಆಯೋಗದಿಂದ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಿ, ಅಂಕಗಳ ಆಧಾರದ ಮೇಲೆ ನೇಮಕಾತಿ ನಡೆಸಲಾಗುತ್ತಿತ್ತು. ಈಗ ನೇಮಕಾತಿ ನಿಯಮ ಬದಲಿಸಿದ್ದು, ಜಿಲ್ಲೆಗಳ ವ್ಯಾಪ್ತಿಯ ನಗರ ಸ್ಥಳೀಯ ಸಂಸ್ಥೆಗಳ ಹುದ್ದೆಗಳನ್ನು ಜಿಲ್ಲಾಮಟ್ಟದಲ್ಲಿಯೇ ನೇಮಕಾತಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ನೇಮಕಾತಿ ಸಮಿತಿ ಮೂಲಕ ಜೇಷ್ಠತೆ, ಅಂಕಗಳ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು. ರಾಜ್ಯದಲ್ಲಿ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳನ್ನು ಜಿಲ್ಲಾಮಟ್ಟದಲ್ಲಿ ಪಿಯುಸಿಯಲ್ಲಿ ಗಳಿಸಿದ ಅಂಕಗಳ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುತ್ತಿದೆ. ಈಗ ಸ್ಥಳೀಯ ಸಂಸ್ಥೆಗಳಲ್ಲಿಯೂ ಅದೇ ರೀತಿ ನೇಮಕಾತಿಗೆ ಮುಂದಾಗಿದ್ದು, ಈ ಬದಲಾವಣೆಗೆ ಸ್ಪರ್ಧಾತ್ಮಕ ಅಭ್ಯರ್ಥಿಗಳಿಂದ ವಿರೋಧ ವ್ಯಕ್ತವಾಗಿದೆ ಎನ್ನಲಾಗಿದೆ.