
ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಕರ್ಫ್ಯೂ ಅವಧಿಯಲ್ಲಿ ಸಡಿಲಿಕೆ ಮಾಡಲಾಗಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ. ಈ ಅವಧಿಯಲ್ಲಿ ಅಂಗಡಿ-ಮುಂಗಟ್ಟುಗಳನ್ನು ತೆರೆಯಲು ಜಿಲ್ಲಾಡಳಿತ ಅವಕಾಶ ನೀಡಿದ್ದು, ಶನಿವಾರವೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಪರಿಸ್ಥಿತಿಯನ್ನು ಅವಲೋಕಿಸಿ ಸೋಮವಾರದಿಂದ ಶಾಲಾ, ಕಾಲೇಜುಗಳನ್ನು ಪ್ರಾರಂಭ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. ಸಾರ್ವಜನಿಕರು ಯಾವುದೇ ವದಂತಿಗೆ ಕಿವಿಗೊಡದೇ ಶಾಂತಿ-ಸುವ್ಯವಸ್ಥೆ ಕಾಪಾಡಬೇಕೆಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ಮನವಿ ಮಾಡಿದ್ದಾರೆ.