alex Certify BREAKING: ನಾಳೆಯೂ ಶಾಲೆ, ಕಾಲೇಜುಗಳಿಗೆ ರಜೆ; ಕರ್ಫ್ಯೂ ಅವಧಿ ಸಡಿಲಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ನಾಳೆಯೂ ಶಾಲೆ, ಕಾಲೇಜುಗಳಿಗೆ ರಜೆ; ಕರ್ಫ್ಯೂ ಅವಧಿ ಸಡಿಲಿಕೆ

ಶಿವಮೊಗ್ಗ: ಶಿವಮೊಗ್ಗ ನಗರದಲ್ಲಿ ಕರ್ಫ್ಯೂ ಅವಧಿಯಲ್ಲಿ ಸಡಿಲಿಕೆ ಮಾಡಲಾಗಿದೆ. ಬೆಳಗ್ಗೆ 6 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ವ್ಯಾಪಾರಕ್ಕೆ ಅವಕಾಶ ನೀಡಲಾಗಿದೆ. ಈ ಅವಧಿಯಲ್ಲಿ ಅಂಗಡಿ-ಮುಂಗಟ್ಟುಗಳನ್ನು ತೆರೆಯಲು ಜಿಲ್ಲಾಡಳಿತ ಅವಕಾಶ ನೀಡಿದ್ದು, ಶನಿವಾರವೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಪರಿಸ್ಥಿತಿಯನ್ನು ಅವಲೋಕಿಸಿ ಸೋಮವಾರದಿಂದ ಶಾಲಾ, ಕಾಲೇಜುಗಳನ್ನು ಪ್ರಾರಂಭ ಮಾಡುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. ಸಾರ್ವಜನಿಕರು ಯಾವುದೇ ವದಂತಿಗೆ ಕಿವಿಗೊಡದೇ ಶಾಂತಿ-ಸುವ್ಯವಸ್ಥೆ ಕಾಪಾಡಬೇಕೆಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಅವರು ಮನವಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...