ಶಿವಮೊಗ್ಗ: ಶಿವಮೊಗ್ಗ ಹಾಗೂ ಭದ್ರಾವತಿ ನಗರ ವ್ಯಾಪ್ತಿಯ ಎಲ್ಲಾ ಶಾಲೆ, ಕಾಲೇಜುಗಳು ಆಗಸ್ಟ್ 17 ರಂದು ಎಂದಿನಂತೆ ನಡೆಯಲಿವೆ ಎಂದು ಜಿಲ್ಲಾಧಿಕಾರಿ ಡಾ. ಆರ್. ಸೆಲ್ವಮಣಿ ತಿಳಿಸಿದ್ದಾರೆ.
ಆಗಸ್ಟ್ 15 ರಂದು ಶಿವಮೊಗ್ಗದಲ್ಲಿ ಸಾವರ್ಕರ್ ಫೋಟೋ ತೆರವು ವಿಚಾರಕ್ಕೆ ಗಲಾಟೆಯಾಗಿ ಯುವಕನಿಗೆ ಚೂರಿ ಇರಿತವಾಗಿದ್ದರಿಂದ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಶಿವಮೊಗ್ಗ, ಭದ್ರಾವತಿ ನಗರ ವ್ಯಾಪ್ತಿಯ ಶಾಲೆ, ಕಾಲೇಜುಗಳಿಗೆ ರಜೆ ನೀಡಲಾಗಿತ್ತು.
ಪರಿಸ್ಥಿತಿ ಸಹಜ ಸ್ಥಿತಿಗೆ ಮರಳಿದ ಹಿನ್ನಲೆಯಲ್ಲಿ ಆಗಸ್ಟ್ 17 ರಿಂದ ಎಂದಿನಂತೆ ಶಾಲಾ, ಕಾಲೇಜುಗಳು ನಡೆಯಲಿವೆ ಎಂದು ಹೇಳಲಾಗಿದೆ.