alex Certify ಇಂಜಿನಿಯರಿಂಗ್ ಕೋರ್ಸ್ ಗಳಿಗೆ ನೇರ ಪ್ರವೇಶ: ಡಿಸಿಇಟಿ 8 ಹೊಸ ಕೋರ್ಸ್ ಪರಿಗಣಿಸಲು ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂಜಿನಿಯರಿಂಗ್ ಕೋರ್ಸ್ ಗಳಿಗೆ ನೇರ ಪ್ರವೇಶ: ಡಿಸಿಇಟಿ 8 ಹೊಸ ಕೋರ್ಸ್ ಪರಿಗಣಿಸಲು ಸೂಚನೆ

ಬೆಂಗಳೂರು: ಡಿಪ್ಲೋಮಾ ವ್ಯಾಸಂಗ ಪೂರೈಸಿದ ಅರ್ಹ ಅಭ್ಯರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಮೂಲಕ ಎರಡನೇ ವರ್ಷದ ಇಂಜಿನಿಯರಿಂಗ್ ಕೋರ್ಸ್ ಗಳಿಗೆ ನೇರ ಪ್ರವೇಶ ಕಲ್ಪಿಸುವ ಡಿಸಿಇಟಿ 2023ರ ಸೀಟು ಹಂಚಿಕೆಯಲ್ಲಿ ಎಂಟು ಹೊಸ ಕೋರ್ಸ್ ಗಳನ್ನು ಪರಿಗಣಿಸಲು ತಾಂತ್ರಿಕ ಶಿಕ್ಷಣ ಇಲಾಖೆಯಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನಿರ್ದೇಶನ ನೀಡಲಾಗಿದೆ.

ಈ ಹೊಸ ಕೋರ್ಸ್ ಗಳನ್ನು ಆಯ್ಕೆ ಮಾಡಿಕೊಳ್ಳಲು ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ತಾಂತ್ರಿಕ ಶಿಕ್ಷಣ ಇಲಾಖೆ ನಿರ್ದೇಶಕರು ಡಿಪ್ಲೋಮಾ ಸಿಇಟಿಯಲ್ಲಿ ಈ ಕೋರ್ಸ್ ಗಳನ್ನು ಸೇರ್ಪಡೆ ಮಾಡುವಂತೆ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಪತ್ರ ಬರೆದು ನಿರ್ದೇಶನ ನೀಡಿದ್ದಾರೆ.

2021- 22ನೇ ಸಾಲಿನಿಂದ ಪ್ರಾರಂಭವಾದ ಹೊಸ ಡಿಪ್ಲೋಮಾ ಕೋರ್ಸ್ ಗಳಿಗೆ ಪ್ರವೇಶಾತಿ ಪಡೆದು ಮೂರು ವರ್ಷಗಳ ಡಿಪ್ಲೋಮಾ ಪೂರ್ಣಗೊಳಿಸಿದ ಅಭ್ಯರ್ಥಿಗಳು 2024- 25 ನೇ ಸಾಲಿನಿಂದ ಲ್ಯಾಟರಲ್ ಎಂಟ್ರಿ ಮೂಲಕ ಎರಡನೇ ವರ್ಷದ/ ಮೂರನೇ ಸೆಮಿಸ್ಟರ್ ಇಂಜಿನಿಯರಿಂಗ್ ಕೋರ್ಸ್ ಗಳಿಗೆ ಪ್ರವೇಶಾತಿ ಪಡೆಯಬಹುದು.

ವಿದ್ಯಾರ್ಥಿಗಳಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೊಸ ಡಿಪ್ಲೋಮೋ ಕೋರ್ಸ್ ಗಳನ್ನು ಆರಂಭಿಸಲಾಗುತ್ತಿದೆ. ಸೈಬರ್ ಫಿಸಿಕಲ್ ಸಿಸ್ಟಮ್ ಅಂಡ್ ಸೆಕ್ಯೂರಿಟಿ, ಆಟೋ ಮಷಿನ್ ರ್‍ಯಾಂಡ್ ರೋಬೋಟಿಕ್, ಗೇಮಿಂಗ್ ಅಂಡ್ ಅನಿಮೇಶನ್, ಕ್ಲೌಂಡ್ ಕಂಪ್ಯೂಟಿಂಗ್ ಅಂಡ್ ಬಿಗ್ ಡೇಟಾ, ಟ್ರಾವೆಲ್ ಅಂಡ್ ಟೂರಿಸಂ, ಆಲ್ಟರ್ನೇಟ್ ಎನರ್ಜಿ ಟೆಕ್ನಾಲಜಿ, ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಅಂಡ್ ಎಲೆಕ್ಟ್ರಿಕಲ್ ವೆಹಿಕಲ್ ಟೆಕ್ನಾಲಜಿ ಕೋರ್ಸ್ ಗಳಿಗೆ ಪ್ರವೇಶ ನೀಡಲಾಗುವುದು ಎನ್ನಲಾಗಿದೆ,

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...