ರಾಜ್ಯದಲ್ಲಿ ಲಾಕ್ ಡೌನ್ ಮುಂದುವರೆಸುವ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀರ್ಮಾನಿಸಲಿದ್ದಾರೆ. ಮೇ 23 ರಂದು ಲಾಕ್ಡೌನ್ ಮುಂದುವರೆಸುವ ಬಗ್ಗೆ ಸಿಎಂ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಹೇಳಿದ್ದಾರೆ.
ಲಾಕ್ ಡೌನ್ ಬಗ್ಗೆ ನನ್ನ ವೈಯಕ್ತಿಕ ಅಭಿಪ್ರಾಯವಿಲ್ಲ. ರಾಜ್ಯದಲ್ಲಿನ ಅಂಕಿ ಅಂಶಗಳನ್ನು ಗಮನಿಸಿ ಮತ್ತಷ್ಟು ಬಿಗಿ ಕ್ರಮ ವಹಿಸಬೇಕೆ? ಇಲ್ಲವೇ ಸಡಿಲಗೊಳಿಸಬೇಕೆ? ಎಂಬುದರ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ತೀರ್ಮಾನಿಸಲಿದ್ದಾರೆ. ಆದರೆ, ಈ ಬಗ್ಗೆ ಭಯವಂತೂ ಇದ್ದೇ ಇದೆ. ಸಾರ್ವಜನಿಕ ವಲಯದ ಗಣ್ಯರು, ವಿರೋಧಪಕ್ಷಗಳ ಸಲಹೆಗಳನ್ನು ಪರಿಗಣಿಸಲಾಗುವುದು ಎಂದು ಹೇಳಿದ್ದಾರೆ.