ಹುಬ್ಬಳ್ಳಿ: ರಾಜ್ಯದ ವಿವಿಧ ವಿಶ್ವವಿದ್ಯಾಲಯಗಳಲ್ಲಿನ ಬೋಧಕ, ಬೋಧಕೇತರ ಸಿಬ್ಬಂದಿ ನೇಮಕಾತಿಗೆ ಸರ್ಕಾರ ಸಂಪೂರ್ಣ ಬೆಂಬಲ ಮತ್ತು ಸಹಕಾರ ನೀಡಲಿದೆ.
ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್. ಅಶ್ವತ್ಥನಾರಾಯಣ ಈ ಬಗ್ಗೆ ಮಾಹಿತಿ ನೀಡಿದ್ದು, ರಾಜ್ಯದ ಗ್ರಾಮೀಣಾಭಿವೃದ್ಧಿ ವಿವಿ, ಕನ್ನಡ ವಿವಿ, ಸಂಗೀತ ವಿವಿ, ಜಾನಪದ ವಿವಿ ಸೇರಿದಂತೆ ಇತರ ವಿಶ್ವವಿದ್ಯಾಲಯಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ ಎಂದು ಹೇಳಿದ್ದಾರೆ.
ಅನೇಕ ವರ್ಷಗಳಿಂದ ಈ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ನೇಮಕಾತಿ ನೆನೆಗುದಿಗೆ ಬಿದ್ದಿರುವುದು ಗಮನಕ್ಕೆ ಬಂದಿದ್ದು, ಇದಕ್ಕೆ ಪೂರಕವಾದ ವಾತಾವರಣ ನಿರ್ಮಿಸಲು ಸರ್ಕಾರ ಕ್ರಮ ಕೈಗೊಳ್ಳಲಿದ್ದು, ನೇಮಕಾತಿಗೆ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.