ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಡೆಯಾಜ್ಞೆ ತೆರವಿಗೆ ಸಿಬಿಐನಿಂದ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿದೆ.
ಸಿಬಿಐ ತನಿಖೆ ನಡೆಸಲು ಸರ್ಕಾರದ ಅನುಮತಿಗೆ ನೀಡಿದ ತಡೆಯಾಜ್ಞೆ ತೆರವಿಗೆ ಸಿಬಿಐನಿಂದ ಹೈಕೋರ್ಟಿಗೆ ಅರ್ಜಿ ಸಲ್ಲಿಸಲಾಗಿದೆ. ಎರಡು ವಾರದಲ್ಲಿ ಅರ್ಜಿ ಇತ್ಯರ್ಥಪಡಿಸುವಂತೆ ಸುಪ್ರೀಂಕೋರ್ಟ್ ಸೂಚಿಸಿದೆ. ಹೀಗಾಗಿ ಶೀಘ್ರ ವಿಚಾರಣೆಗೆ ಸಿಬಿಐ ಎಸ್.ಪಿ.ಪಿ. ಪ್ರಸನ್ನಕುಮಾರ್ ಮನವಿ ಮಾಡಿದ್ದಾರೆ.
ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ನವೆಂಬರ್ 22ಕ್ಕೆ ನಿಗದಿಪಡಿಸಿದೆ. ಏಕಸದಸ್ಯ ಪೀಠ ಡಿ.ಕೆ. ಶಿವಕುಮಾರ್ ಅರ್ಜಿ ವಜಾಗೊಳಿಸಿತ್ತು. ವಿಭಾಗಿಯಪೀಠ ಸಿಬಿಐ ತನಿಖೆಗೆ ಸರ್ಕಾರದ ಅನುಮತಿಗೆ ತಡೆ ನೀಡಿತ್ತು. ತಡೆಯಾಜ್ಞೆ ತೆರವು ಕೋರಿ ಸಿಬಿಐನಿಂದ ಅರ್ಜಿ ಸಲ್ಲಿಸಲಾಗಿದೆ.