ಬೆಂಗಳೂರು : ಮುನಿರತ್ನ ಆಡಿಯೋ ಪ್ರಕರಣದ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಈ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ ಎಂದು ಹೇಳಿದ್ದಾರೆ.
ಬಿಜೆಪಿ ಶಾಸಕ ಮುನಿರತ್ನ ಬಂಧನದ ಹಿಂದೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಅವರ ಸಹೋದರ ಡಿ.ಕೆ. ಸುರೇಶ್ ಕೈವಾಡ ಇದೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಆರೋಪಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಡಿಕೆ ಶಿವಕುಮಾರ್ ಮುನಿರತ್ನ ಆಡಿಯೋ ಪ್ರಕರಣದ ಬಗ್ಗೆ ನನಗೇನು ಗೊತ್ತಿಲ್ಲ ಎಂದರು.