ರಾಮನಗರ : ಡಿಸಿಎಂ ಡಿಕೆ ಶಿವಕುಮಾರ್ ಗೆ ಹೈಕೋರ್ಟ್ ರಿಲೀಫ್ ನೀಡಿಲ್ಲ, ಇವರೇ ತಗೊಂಡಿದ್ದು ಎಂದು ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ‘ ಗ್ಯಾರಂಟಿ ಯೋಜನೆ ಮೂಲಕ ದೇಶದಲ್ಲಿ ಅಧಿಕಾರಕ್ಕೆ ಬರಬಹುದು, ಅಧಿಕಾರಕ್ಕೆ ಬಂದ ಮೇಲೆ ಎಲ್ಲಾ ಕೇಸ್ ಮುಚ್ಚಿ ಹಾಕಬಹುದು ಎಂಬ ಲೆಕ್ಕಾಚಾರದಲ್ಲಿದ್ದಾರೆ ಎಂದರು. ಇದೆಲ್ಲಾ ಅವರ ತಂತ್ರಗಾರಿಕೆ ಅಷ್ಟೇ, ಇದೆಲ್ಲಾ ಜಾಸ್ತಿ ದಿನ ನಡೆಯೋಲ್ಲ ಎಂದು ಹೆಚ್ಡಿಕೆ ಹೇಳಿದರು.
ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಅಧಿಕ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಹೈಕೋರ್ಟ್ ನಲ್ಲಿ ನಿನ್ನೆ ಮೇಲ್ಮನವಿ ಅರ್ಜಿ ವಿಚಾರಣೆ ನಡೆದಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಮೇಲ್ಮನವಿ ವಾಪಸ್ ಗೆ ಅನುಮತಿ ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.