ಮೈಸೂರು: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮತ್ತೆ ಮುಖ್ಯಮಂತ್ರಿ ಆಗುವ ಆಸೆ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿ ನಡೆದ ಒಕ್ಕಲಿಗರ ಸಭೆಯಲ್ಲಿ ಮಾತನಾಡಿದ ಡಿಸಿಎಂ ಡಿಕೆಶಿ, ದೆಹಲಿಯಲ್ಲಿ ಏನು ಆಗಬೇಕೋ ಎಲ್ಲವೂ ತೀರ್ಮಾನವಾಗಿದೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿಯಾಗುವ ಸುಳಿವು ನೀಡಿದ್ದಾರೆ.
ಇಲ್ಲಿ ನಾಯಕತ್ವ ವಿಚಾರದಲ್ಲಿ ನಮ್ಮ ಸಮಾಜದವರಿಗೆ ಸ್ವಲ್ಪ ಸಮಸ್ಯೆ ಆಗಿದೆ. ಈಗ ಸಚಿವ ವೆಂಕಟೇಶ್, ಹರೀಶ್ ಗೌಡ ಮುಂದಾಳತ್ವ ವಹಿಸಿದ್ದಾರೆ. ನಾನು ನಿಮ್ಮೂರಿನ ಅಳಿಯ. ನನಗೂ ದೊಡ್ಡ ಜವಾಬ್ದಾರಿ ಇದೆ. ನೀವು ತಲೆಕೆಡಿಸಿಕೊಳ್ಳಲು ಹೋಗಬೇಡಿ, ಸ್ವಲ್ಪ ದಿನ ಅಷ್ಟೇ ಎಂದು ಹೇಳಿದ್ದಾರೆ.
ಚೆಲುವರಾಯಸ್ವಾಮಿ, ಕೃಷ್ಣ ಬೈರೇಗೌಡ ನನ್ನ ಬಳಿ ಚರ್ಚಿಸಿದ್ದರು. ಈ ಭಾಗದ ನ್ಯಾಯದ ಬಗ್ಗೆ ಇಬ್ಬರು ಮಾತನಾಡಿದರು. ನೀವು ಹೇಳುವುದು ಬೇಡ, ನಿಮ್ಮ ನ್ಯಾಯ ನಡೆಯುವುದಿಲ್ಲ. ದೆಹಲಿಯಲ್ಲಿ ಎಲ್ಲವೂ ನಡೆಯಬೇಕು ಎಂದು ಹೇಳಿದ್ದೇನೆ. ಅದರ ಬಗ್ಗೆ ಈಗ ಚರ್ಚೆ ಬೇಡವೆಂದು ಹೇಳಿದ್ದೇನೆ. ಇದು 5 ವರ್ಷದ ಸರ್ಕಾರ ಅಲ್ಲ, 10 ವರ್ಷದ ಸರ್ಕಾರ. ನೀವು ಎಲ್ಲರೂ ನಮ್ಮ ಬೆಂಬಲಕ್ಕೆ ನಿಲ್ಲಬೇಕು. ದೆಹಲಿಯಲ್ಲಿ ಏನು ಆಗಬೇಕೋ ಎಲ್ಲವೂ ತೀರ್ಮಾನ ಆಗಿದೆ ಎಂದು ಪರೋಕ್ಷವಾಗಿ ಸಿಎಂ ಸ್ಥಾನ ಸಿಗುತ್ತದೆ ಎಂದು ಹೇಳಿದ್ದಾರೆ.