ಮೈಸೂರು : ಸಿಎಂ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ಹರಕೆ ಸಲ್ಲಿಸಿದರು.
ತಾಯಿ ಚಾಮುಂಡೇಶ್ವರಿಗೆ ಹಸಿರು ಮತ್ತು ಕೆಂಪು ಸೀರೆ ನೀಡಿ ಹರಕೆ ಸಲ್ಲಿಸಿದರು. ಕಾಂಗ್ರೆಸ್ ಗ್ಯಾರಂಟಿ ಯೋಜನೆ ಯಶಸ್ವಿಯಾಗಲೆಂದು ಹರಕೆ ಕಟ್ಟಿಕೊಂಡಿದ್ದರು. ಇಂದು ಚಾಮುಂಡಿ ದೇವಿಗೆ ಹರಕೆ ಒಪ್ಪಿಸಿದರು. ಗ್ಯಾರಂಟಿ ಕಾರ್ಡ್ ಇಟ್ಟು ಪೂಜೆ ಸಲ್ಲಿಸುವಾಗ ಹರಕೆ ಕಟ್ಟಿಕೊಂಡಿದ್ದರು. ಅದರಂತೆ ಈಗ ಹರಕೆ ಸಲ್ಲಿಸಿದ್ದಾರೆ. ಕನಕಾಂಬರ, ಮಲ್ಲಿಗೆ, ಗುಲಾಬಿ ಸೇರಿ ವಿವಿಧ ಬಗೆಯ ಹೂವಿನ ಹಾರ ಮತ್ತು ಫಲ ಸಮರ್ಪಣೆ ಮಾಡಿದರು.ಅಲ್ಲದೇ ನಾಳೆ ಮೈಸೂರಿನಲ್ಲಿ ಗೃಹಲಕ್ಷ್ಮಿ ಯೋಜನೆಗೆ ಚಾಲನೆ ನೀಡಲಾಗುತ್ತಿದ್ದು, ಈಗಾಗಲೇ ಕಾರ್ಯಕ್ರಮಕ್ಕೆ ಎಲ್ಲಾ ಸಿದ್ದತೆ ನಡೆದಿದೆ.
ನಂತರ ಮಾತನಾಡಿದ ಡಿಸಿಎಂ ಡಿಕೆಶಿ ಇಂದು ನಡೆಯಲಿರುವ ಕಾವೇರಿ ನದಿ ನಿರ್ವಹಣಾ ಪ್ರಾಧಿಕಾರದ ಸಭೆಯಲ್ಲಿ ನಮ್ಮ ವಾದವನ್ನು ಸಮರ್ಥವಾಗಿ ಮಂಡಿಸುತ್ತೇವೆ. ನಮ್ಮ ರೈತರ ಹಿತ ಕಾಪಾಡುವ ಕೆಲಸ ರಾಜ್ಯ ಸರ್ಕಾರ ಮಾಡಲಿದೆ ಎಂದು ಡಿಸಿಎಂ ಡಿಕೆಶಿ ಹೇಳಿದರು.