ಬೆಂಗಳೂರು: ಮೂರು ವಿಧಾನಸಭಾ, ಒಂದು ವಿಧಾನ ಪರಿಷತ್ ಕ್ಷೇತ್ರಗಳ ಉಪ ಚುನಾವಣೆ ಗೆಲುವಿಗೆ ತಂತ್ರಗಾರಿಕೆ ರೂಪಿಸಲು ಉಸ್ತುವಾರಿ ಸಮಿತಿ ರಚಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಉಸ್ತುವಾರಿ ಸಮಿತಿಗಳನ್ನು ರಚಿಸಿದ್ದಾರೆ.
ಸಚಿವರು, ಸಂಸದರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ಒಳಗೊಂಡ ಸಮಿತಿ ರಚಿಸಲಾಗಿದೆ. ಚನ್ನಪಟ್ಟಣ ಕ್ಷೇತ್ರಕ್ಕೆ ಸಚಿವ ಚಲುವರಾಯಸ್ವಾಮಿ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಶಿಗ್ಗಾಂವಿ ಕ್ಷೇತ್ರಕ್ಕೆ ಸಚಿವ ಈಶ್ವರ್ ಖಂಡ್ರೆ, ಸಂಡೂರು ಕ್ಷೇತ್ರಕ್ಕೆ ಸಚಿವ ಜಮೀರ್ ಅಹ್ಮದ್ ನೇತೃತ್ವದ ಸಮಿತಿ ರಚಿಸಲಾಗಿದೆ.
ಉಡುಪಿ –ದಕ್ಷಿಣ ಕನ್ನಡ ವಿಧಾನ ಪರಿಷತ್ ಕ್ಷೇತ್ರಕ್ಕೆ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದ ಸಮಿತಿ ರಚಿಸಲಾಗಿದೆ. ಮೂರು ವಿಧಾನಸಭಾ ಕ್ಷೇತ್ರಗಳು, ಒಂದು ವಿಧಾನ ಪರಿಷತ್ ಕ್ಷೇತ್ರ ಉಪ ಚುನಾವಣೆಯಲ್ಲಿ ಗೆಲ್ಲಲು ಕಾರ್ಯತಂತ್ರ ರೂಪಿಸಿರುವ ಡಿ.ಕೆ. ಶಿವಕುಮಾರ್ ಇದರ ಭಾಗವಾಗಿ ಉಸ್ತುವಾರಿ ಸಮಿತಿ ರಚಿಸಿದ್ದಾರೆ.