ಬೆಂಗಳೂರು: ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಬಿಬಿಎಂಪಿ ಸೇರಿದಂತೆ ನಗರ ವ್ಯಾಪ್ತಿಯ ಸಂಸ್ಥೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ರಜೆ ಮೇಲೆ ತೆರಳದೇ ನಗರದಲ್ಲಿಯೇ ಇರುವಂತೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚಿಸಿದ್ದಾರೆ.
ಜನವರಿ 3ರವರೆಗೆ ಹೊಸ ವರ್ಷದ ಸಂಭ್ರಮಾಚರಣೆ ಇರಲಿದ್ದು, ಎಲ್ಲಾ ವ್ಯವಸ್ಥೆಯನ್ನು ಜಾಗರೂಕತೆಯಿಂದ ಮಾಡಿ ಜನರಿಗೆ ಸೇವೆ ನೀಡಬೇಕು. ಶಾಂತಿ ಸುವ್ಯವಸ್ಥೆ ಕಾಪಾಡಬೇಕು ಎಂದು ಸೂಚಿಸಲಾಗಿದೆ ಎಂದು ಹೇಳಿದ್ದಾರೆ.
ಬಿಬಿಎಂಪಿ, ಜಲ ಮಂಡಳಿ, ಬೆಸ್ಕಾಂ ಸೇರಿದಂತೆ ಎಲ್ಲಾ ವಿಭಾಗದ ಅಧಿಕಾರಿಗಳು ಕರ್ತವ್ಯದಲ್ಲಿ ಹಾಜರಿರಬೇಕು. ರಜೆ ಪಡೆಯದೆ ಜನಸಾಮಾನ್ಯರಿಗೆ ತೊಂದರೆಯಾಗದಂತೆ ಕೆಲಸ ಮಾಡಲು ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.