ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಲೋಕಾಯುಕ್ತ ಸಂಸ್ಥೆಯಿಂದ ನೋಟಿಸ್ ನೀಡಲಾಗಿದೆ. ಅಕ್ರಮ ಆಸ್ತಿ ಗಳಿಕೆ ಪ್ರಕರಣ ಸಂಬಂಧ ದಾಖಲೆ ಒದಗಿಸಲು ನೋಟಿಸ್ ನೀಡಲಾಗಿದೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಸಿಬಿಐ ತನಿಖೆಯನ್ನು ಸರ್ಕಾರ ರದ್ದು ಮಾಡಿದ್ದು, ಲೋಕಾಯುಕ್ತ ತನಿಖೆಗೆ ಆದೇಶಿಸಿತ್ತು. ಲೋಕಾಯುಕ್ತ ಸಂಸ್ಥೆಯಲ್ಲಿ ಡಿಸಿಎಂ ಡಿಕೆ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಸಿಬಿಐಗೆ ನೀಡಿರುವ ದಾಖಲೆ ಮತ್ತು ಮಾಹಿತಿ ಒದಗಿಸುವಂತೆ ಲೋಕಾಯುಕ್ತ ಪೊಲೀಸರು ಡಿಸಿಎಂ ಡಿಕೆಶಿಗೆ ನೋಟಿಸ್ ನೀಡಿದ್ದಾರೆ.